ಕುಮಾರಸ್ವಾಮಿ 'ಕರಿಯಾ' ಹೇಳಿಕೆ: ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾದ ಕಾಂಗ್ರೆಸ್
ಪಕ್ಷಕ್ಕೆ ಹಾನಿ ಮಾಡಿದ ಮತ್ತು ಮುಜುಗರ ಉಂಟು ಮಾಡಿದ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಕ್ಷವನ್ನು ಒತ್ತಾಯಿಸುತ್ತಿದ್ದಾರೆ.

ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು 'ಕರಿಯಾ' ಎಂದು ಟೀಕಿಸಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ರಾಜ್ಯ ಕಾಂಗ್ರೆಸ್ ಶಿಸ್ತು ಕ್ರಮ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದ್ದಾರೆ.
ಹಲವು ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷಕ್ಕೆ ಹಾನಿ ಮಾಡಿದ ಮತ್ತು ಮುಜುಗರ ಉಂಟು ಮಾಡಿದ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಕ್ಷವನ್ನು ಒತ್ತಾಯಿಸುತ್ತಿದ್ದಾರೆ.
"ನಮ್ಮ ರಾಜ್ಯ ಕಾಂಗ್ರೆಸ್ ಅಧ್ಯಕ್ಷ(ಡಿ ಕೆ ಶಿವಕುಮಾರ್)ರು, ಉಪಚುನಾವಣೆಯ ನಂತರ, ಅವರ (ಖಾನ್) ಹೇಳಿಕೆ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ. ಪಕ್ಷದಲ್ಲಿ ರಹಮಾನ್ ಖಾನ್ ನೇತೃತ್ವದಲ್ಲಿ ಶಿಸ್ತು ಸಮಿತಿಯಿದೆ. ಪಕ್ಷದ ಅಧ್ಯಕ್ಷರು ಈ ಕುರಿತು ಕ್ರಮಕ್ಕೆ ಶಿಸ್ತು ಸಮಿತಿಗೆ ಸೂಚಿಸಿದರೆ, ಅವರು ಖಾನ್ ಅವರನ್ನು ಕರೆದು ವಿಚಾರಿಸಬಹುದು” ಎಂದು ಪರಮೇಶ್ವರ ಅವರು ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯ ಗಂಭೀರವಾಗಿದ್ದರೆ ಸಮಿತಿಯು ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು.
ನವೆಂಬರ್ 13 ರಂದು, ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯು ಪಕ್ಷದ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅನೇಕ ಕಾಂಗ್ರೆಸ್ ಮುಖಂಡರು ನಂಬಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



