ರಾಜಕೀಯ

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಮುಂದು; ಡಿಸೆಂಬರ್ 5 ಕ್ಕೆ ಕಾಂಗ್ರೆಸ್ ಮೆಗಾ ರ‍್ಯಾಲಿಗೆ ಸಿದ್ಧತೆ!

ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ ನೇತೃತ್ವದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಮುಂದು; ಡಿಸೆಂಬರ್ 5 ಕ್ಕೆ ಕಾಂಗ್ರೆಸ್ ಮೆಗಾ ರ‍್ಯಾಲಿಗೆ ಸಿದ್ಧತೆ!
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Published On :

ಬೆಂಗಳೂರು: ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ ಹಾಗೂ ಜೆಡಿಎಸ್ ಪ್ರಾಬಲ್ಯದ ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಡಿಸೆಂಬರ್ 5 ರಂದು ಮೆಗಾ ರ‍್ಯಾಲಿ ನಡೆಸಲು ಆಡಳಿತಾರೂಢ ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದೆ. ಸಿದ್ದರಾಮಯ್ಯ ಹಿರಿಯ ಸಚಿವರೊಂದಿಗೆ ಸೋಮವಾರ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.

ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ ನೇತೃತ್ವದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜಣ್ಣ, ಹೌದು, ಬಲವಾದ ಸಂದೇಶ ರವಾನಿಸಲು ಹಾಸನದಲ್ಲಿ ರಾಜಕೀಯ ಸಮಾವೇಶಕ್ಕೆ ಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಮಧ್ಯೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ತುಮಕೂರಿನಲ್ಲಿ ಡಿಸೆಂಬರ್ 2 ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮತ್ತೊಂದು ರ‍್ಯಾಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.