ರಾಜಕೀಯ

ಶಿಗ್ಗಾಂವಿ ಫಲಿತಾಂಶ: ಮಾಜಿ ಸಿಎಂ ಬೊಮ್ಮಾಯಿ ಪುತ್ರನ ವಿರುದ್ಧ ಕಾಂಗ್ರೆಸ್ ನ ಪಠಾಣ್ ಗೆಲುವು

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಶಿಗ್ಗಾಂವಿ ಫಲಿತಾಂಶ: ಮಾಜಿ ಸಿಎಂ ಬೊಮ್ಮಾಯಿ ಪುತ್ರನ ವಿರುದ್ಧ ಕಾಂಗ್ರೆಸ್ ನ ಪಠಾಣ್ ಗೆಲುವು
ಭರತ್ ಬೊಮ್ಮಾಯಿ ಹಾಗೂ ಯಾಸಿರ್ ಅಹ್ಮದ್ ಖಾನ್ ಪಠಾಣ್
Published On :

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತರದಿಂದ ಸೋಲಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ವಿರುದ್ಧ ಸೋಲು ಕಂಡಿದ್ದ ಪಠಾಣ್ ಅವರು ಈ ಬಾರಿ 1,00,756 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಭರತ್ ಬೊಮ್ಮಾಯಿ ಅವರು 87,308 ಮತಗಳನ್ನು ಪಡೆದಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಲೋಕಸಭೆ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಶಿಗ್ಗಾಂವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಶಿಗ್ಗಾಂವ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13 ರಂದು ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.