ರಾಜಕೀಯ

3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಸಚಿವ ಶರಣಪ್ರಕಾಶ್ ಪಾಟೀಲ್

ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಮತ್ತು ಮೈಸೂರು ಭಾಗದ ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದರಿಂದ ಎಕ್ಸಿಟ್ ಪೋಲ್‌ಗಳು ಸುಳ್ಳು ಎಂದು ಸಾಬೀತಾಗಿದೆ.

3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಸಚಿವ ಶರಣಪ್ರಕಾಶ್ ಪಾಟೀಲ್
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್
Published On :

ಕಲಬುರಗಿ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾ8ಗಿದೆ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಮತ್ತು ಮೈಸೂರು ಭಾಗದ ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದರಿಂದ ಎಕ್ಸಿಟ್ ಪೋಲ್‌ಗಳು ಸುಳ್ಳು ಎಂದು ಸಾಬೀತಾಗಿದೆ ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಿಡಿಕಾರಿದ ಅವರು, ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಮತ್ತು ವಕ್ಫ್ ಆಸ್ತಿ ವಿಚಾರದಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು. ಆದರೆ, ಜನರು ತಕ್ಕ ಉತ್ತರ ನೀಡಿದ್ದಾರೆ. ಇದು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ತಂದಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದಾದ್ಯಂತ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದೆ. ಒಂದೂವರೆ ವರ್ಷದೊಳಗೆ ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರನ್ನು ತಲುಪುವಂತೆ ಮಾಡಿದೆ. ಇದರ ಫಲಿತಾಂಶ ಉಪಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಬಿಜೆಪಿ-ಜೆಡಿಎಸ್ ನಾಯಕರು ಜನರನ್ನು ವಂಚಿಸಲು ಹಲವು ತಿಂಗಳುಗಳಿಂದ ಸುಳ್ಳು ನಾಟಕಗಳನ್ನು ಮಾಡಿದರು. ಆದರೆ, ಮತದಾರರು ಪ್ರತಿ ಕ್ಷಣವೂ ತಮ್ಮ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.