ಮುಡಾ ಹಗರಣದ ತನಿಖೆ CBIಗೆ ವರ್ಗಾಯಿಸಿ: ಸರ್ಕಾರಕ್ಕೆ BJP ಆಗ್ರಹ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್‌ಅವರು, ಸಿಎಂ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿದರು.
ಮುಡಾ ಪ್ರಕರಣದಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿರುವ ಕುರಿತು ಪ್ರತಿಕ್ರಿಯಿಸಿ, ತಮ್ಮ ನಿವೇಶನಗಳನ್ನು ಕಳೆದುಕೊಳ್ಳುವ ಭೀತಿಯಿಂದ ಈ ರೀತಿ ಹೇಳಿಕೆ ನೀಡಿರಬಹುದು ಎಂದು ಹೇಳಿದರು.
ದಸರಾ ಉದ್ಘಾಟನೆ ವೇಳೆ ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮುಖಂಡರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.
ಇದೇ ವೇಳೆ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ರಾಜಕೀಯ ಮಾತನಾಡಿದ್ದಕ್ಕಾಗಿ ಮತ್ತು ಸಿದ್ದರಾಮಯ್ಯನವರನ್ನು ಹೊಗಳಿದ್ದಕ್ಕಾಗಿ ವಾಗ್ದಾಳಿ ನಡೆಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



