ರಾಜಕೀಯ

ಕಾಫಿ ಹೀರುತ್ತಾ ಸಿಎಂ ಬಗ್ಗೆ ಚರ್ಚೆ ಮಾಡಿದರೆ ತಪ್ಪೇನು?: ಡಾ. ಜಿ.ಪರಮೇಶ್ವರ್

ನಾವು ಮಾತನಾಡುವುದರಿಂದ ಏನು ಆಗುವುದಿಲ್ಲ. ನಿರ್ಧಾರ ಎಲ್ಲ ಹೈಕಮಾಂಡ್ ಮಾಡುತ್ತದೆ. ಅಂತಹ ಸನ್ನಿವೇಶ ಈಗ ಬಂದಿಲ್ಲ. ಸನ್ನಿವೇಶ ಬಂದಾಗ ಚರ್ಚೆ ಮಾಡೋಣ.

ಕಾಫಿ ಹೀರುತ್ತಾ ಸಿಎಂ ಬಗ್ಗೆ ಚರ್ಚೆ ಮಾಡಿದರೆ ತಪ್ಪೇನು?: ಡಾ. ಜಿ.ಪರಮೇಶ್ವರ್
ಗೃಹ ಸಚಿವ ಡಾ.ಜಿ.ಪರಮೇಶ್ವರ್
Published On :

ಬೆಂಗಳೂರು: ಬಿಜೆಪಿಯವರು ಚಾಯ್ ಪೇ ಚರ್ಚಾ ಮಾಡಿದ ಹಾಗೆ ಕಾಂಗ್ರೆಸ್ ನಾಯಕರು ಕಾಫಿ ಹೀರುತ್ತಾ ಮುಖ್ಯಮಂತ್ರಿಯ ಬಗ್ಗೆ ಚರ್ಚೆ ಮಾಡಿದರೆ ಅದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ದಲಿತ ನಾಯಕರು ಪದೇ ಪದೇ ಪಕ್ಷದ ವರಿಷ್ಠರನ್ನು ಭೇಟಿಯಾಗುತ್ತಿದ್ದು, ಈ ಬೆಳವಣಿಗೆ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ತೀವ್ರಗೊಳ್ಳುವಂತೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಅವರು, ಚರ್ಚೆಗಳಾದರೆ ಒಳ್ಳೆಯದಲ್ಲವೇ. ಚಾಯ್ ಪೇ ಚರ್ಚೆ ಅಂತ ಕಾರ್ಯಕ್ರಮ ಇದೆಯಲ್ಲ. ಅದೇ ರೀತಿ ಕಾಫಿ ಪೇ‌ ಚರ್ಚೆ. ನಾವಿಬ್ಬರು ಕುಳಿತುಕೊಂಡು ಎರಡು ಲೋಟ ಕಾಫಿ ಕುಡಿದರೆ ಮುಖ್ಯಮಂತ್ರಿ ಮಾಡಿ ಬಿಡುತ್ತಾರೆ ಎನ್ನುವುದಾದರೆ ಬಹಳ ಚರ್ಚೆಗಳಾಗುತ್ತಿದ್ದವು. ಬಹಳಷ್ಟು ಕಾಫಿ ಖರ್ಚಾಗುತ್ತಿತ್ತು.

ನಾವು ಮಾತನಾಡುವುದರಿಂದ ಏನು ಆಗುವುದಿಲ್ಲ. ನಿರ್ಧಾರ ಎಲ್ಲ ಹೈಕಮಾಂಡ್ ಮಾಡುತ್ತದೆ. ಅಂತಹ ಸನ್ನಿವೇಶ ಈಗ ಬಂದಿಲ್ಲ. ಸನ್ನಿವೇಶ ಬಂದಾಗ ಚರ್ಚೆ ಮಾಡೋಣ, ಅದರ ಬಗ್ಗೆ ಕೂಗು ಹಾಕೋಣ, ಬೇಡಿಕೆ‌ ಇಡೋಣ. ಬೇಕಾದದ್ದು ಮಾಡೋಣ. ಆದರೆ, ಈಗ ಸನ್ನಿವೇಶ ಬಂದಿಲ್ಲವಲ್ಲ. ಮುಖ್ಯಮಂತ್ರಿ ರಾಜೀನಾಮೆ ಕೊಡುವ ಅಗತ್ಯವು ಇಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.