ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್'ಗೆ ಗೆಲುವು: ಡಿ.ಕೆ ಶಿವಕುಮಾರ್ ವಿಶ್ವಾಸ
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಈಗಾಗಲೇ ಸಿದ್ಥತೆ ಆರಂಭಿಸಿದ್ದು, ಗೆಲ್ಲುವ ವಿಶ್ವಾಸವಿದೆ.

ಬೆಂಗಳೂರು: ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ಕಾಂಗ್ರೆಸ್ ಸಿದ್ಧವಿದ್ದು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವ ಸಾಧಿಸುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದರು.
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಈಗಾಗಲೇ ಸಿದ್ಥತೆ ಆರಂಭಿಸಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಇದೇ ವೇಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಚುನಾವಣೆಯಲ್ಲಿ ನಾವೇ ಅಭ್ಯರ್ಥಿಗಳು ಎಂದು ತಿಳಿಸಿದರು.
ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರು ತಮ್ಮ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ ಎಂಬ ಊಹಾಪೋಹಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಜೆಡಿಎಸ್-ಬಿಜೆಪಿ ಮೈತ್ರಿಕೂಟ ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಿಸಿದ ನಂತರ ಮತ್ತು ಯೋಗೇಶ್ವರ ಅವರ ನಿಲುವು ತಳೆದ ನಂತರವೇ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿ ಪರ ಹಾಗೂ ಅಭಿವೃದ್ಧಿ ಪರ ಹೋರಾಟಕ್ಕೆ ಮತದಾರರು ಬೆಂಬಲ ನೀಡಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿರುವ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



