ರಾಜಕೀಯ

ಶಿಗ್ಗಾಂವಿಯಲ್ಲಿ 'ಕೈ'ಗೆ ಬಂಡಾಯದ ಬಿಸಿ: ನಾಮಪತ್ರ ಸಲ್ಲಿಸಿದ ಖಾದ್ರಿ, ಮನವೊಲಿಕೆಗೆ ಬಂದಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು!

ಶಿಗ್ಗಾಂವಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಅನ್ನು ನಾಮಪತ್ರ ಸಲ್ಲಿಕೆಗೆ ಇನ್ನು 13 ನಿಮಿಷ ಬಾಕಿ ಇರುವಂತೆ ಬೈಕ್ ನಲ್ಲಿ ಬಂದ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸಿದ್ದಾರೆ.

ಶಿಗ್ಗಾಂವಿಯಲ್ಲಿ 'ಕೈ'ಗೆ ಬಂಡಾಯದ ಬಿಸಿ: ನಾಮಪತ್ರ ಸಲ್ಲಿಸಿದ ಖಾದ್ರಿ, ಮನವೊಲಿಕೆಗೆ ಬಂದಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು!
ಅಜ್ಜಂಪೀರ್ ಖಾದ್ರಿ
Published On :

ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಬದಲಿಗೆ ಯಾಸಿರ್ ಅಹ್ಮದ್ ಖಾನ್ ಗೆ ಟಿಕೆಟ್ ಘೋಷಣೆಯಾಗಿತ್ತು. ಇದರಿಂದ ಬೇಸರಗೊಂಡಿರುವ ಅಜ್ಜಂಪೀರ್ ಖಾದ್ರಿ ಇದೀಗ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಶಿಗ್ಗಾಂವಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಅನ್ನು ನಾಮಪತ್ರ ಸಲ್ಲಿಕೆಗೆ ಇನ್ನು 13 ನಿಮಿಷ ಬಾಕಿ ಇರುವಂತೆ ಬೈಕ್ ನಲ್ಲಿ ಬಂದ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸಿದ್ದಾರೆ. ಅಜ್ಜಂಪೀರ್ ಖಾದ್ರಿಯ ಈ ನಡೆ ಇದೀಗ ಕಾಂಗ್ರೆಸ್ಸಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಅಜ್ಜಂಪೀರ್ ಖಾದ್ರಿಗೂ ಮೊದಲು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ನಾಮಪತ್ರ ಸಲ್ಲಿಸಿದ್ದರು. ಅಲ್ಲದೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸದಂತೆ ಮನವೊಲಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಅಜ್ಜಂಪೀರ್ ಖಾದ್ರಿ ಬೆಂಬಲಿಗರು ಜಮೀರ್ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಇದರಿಂದಾಗಿ ಕಾರಿನ ಗ್ಲಾಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಶಿಗ್ಗಾಂವಿ ಬಿಜೆಪಿ ಶಾಸಕರಾಗಿದ್ದ ಮಾಜಿ ಸಿಎಂ, ಪ್ರಸ್ತುತ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರ ರಾಜಿನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು. ಇನ್ನು ಬಿಜೆಪಿ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.