ರಾಜಕೀಯ

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್‌ ಕುಮಾರಸ್ವಾಮಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆ, ಇಂದು ನಾಮಪತ್ರ ಸಲ್ಲಿಕೆ!

ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಕಣಕ್ಕಿಳಿದಿರುವ ಸೈನಿಕನ ವಿರುದ್ಧ ಬಿಜೆಪಿ ಜೆಡಿಎಸ್ ದೋಸ್ತಿ ಪಡೆ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕೆ ಇಳಿಸಿದೆ.

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್‌ ಕುಮಾರಸ್ವಾಮಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆ, ಇಂದು ನಾಮಪತ್ರ ಸಲ್ಲಿಕೆ!
ಎಚ್ ಡಿ ಕುಮಾರಸ್ವಾಮಿ - ಬಿಎಸ್ ಯಡಿಯೂರಪ್ಪ ಹಾಗೂ ನಿಖಿಲ್ ಕುಮಾರಸ್ವಾಮಿ
Published On :

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ಬಳಿಕ ಎನ್‌ಡಿಎ ಅಭ್ಯರ್ಥಿ ಯಾರು ಎಂಬುದಕ್ಕೆ ಗುರುವಾರ ಸ್ಪಷ್ಟತೆಗಳ ಸಿಕ್ಕಿತ್ತು. ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ.

ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಕಣಕ್ಕಿಳಿದಿರುವ ಸೈನಿಕನ ವಿರುದ್ಧ ಬಿಜೆಪಿ ಜೆಡಿಎಸ್ ದೋಸ್ತಿ ಪಡೆ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕೆ ಇಳಿಸಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಎದುರಾಳಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸ್ಪರ್ಧಿಸಿದ ಚುನಾವಣೆ ಅಂತೆಯೇ ಚನ್ನಪಟ್ಟಣ ಉಪಚುನಾವಣೆ ಕೂಡ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿದೆ.

ಚನ್ನಪಟ್ಟಣ ಉಪಚುನಾವಣೆ ರಾಜಕೀಯದಲ್ಲಿ ಎಲ್ಲವೂ ನಿರೀಕ್ಷೆಯಂತೆ ನಡೆದಿದೆ. ಸಾಕಷ್ಟು ಹೈಡ್ರಾಮಾ, ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಡುವೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕೊನೆಯ ದಿನವಾಗಿದ್ದು, ಇದರಂತೆ ಇಂದು(ಅ.25) ನಿಖಿಲ್ ಕುಮಾರಸ್ವಾಮಿಯವರು ಬಿಜೆಪಿ-ಜೆಡಿಎಸ್ ನಾಯಕರ ಜೊತೆಗೂಡಿ ನಾಮಪತ್ರ ಸಲ್ಲಿಸಲಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಅವರು 2019ರಲ್ಲಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‌ ವಿರುದ್ಧ ಸೋಲು ಅನುಭವಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.