JDS ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ.ಟಿ ದೇವೇಗೌಡಗೆ ಕೊಕ್; ಅನಿತಾ ಕುಮಾರಸ್ವಾಮಿ, ರೇವಣ್ಣಗೆ ಸ್ಥಾನ!
40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ.

ಬೆಂಗಳೂರು: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಜೆಡಿಎಸ್ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಆದರೆ ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರನ್ನು ಮಾತ್ರ ನಮೂದು ಮಾಡಿಲ್ಲ.
ಇತ್ತೀಚೆಗೆ ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಜಿ.ಟಿ ದೇವೇಗೌಡರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ್ದರು. ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಜಿಟಿ ದೇವೇಗೌಡ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಸ್ಟಾರ್ ಪ್ರಚಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಮುಖ ಸ್ಟಾರ್ ಪ್ರಚಾರಕರು:
HD ದೇವೇಗೌಡ – ರಾಷ್ಟ್ರೀಯ ಅಧ್ಯಕ್ಷ
HD ಕುಮಾರಸ್ವಾಮಿ – ಕೇಂದ್ರ ಸಚಿವ, ರಾಜ್ಯಾಧ್ಯಕ್ಷ.
ಸುರೇಶ್ ಬಾಬು – ಶಾಸಕಾಂಗ ನಾಯಕ
ಅನಿತಾ ಕುಮಾರಸ್ವಾಮಿ – ಮಾಜಿ ಶಾಸಕಿ.
ಸಾ.ರಾ. ಮಹೇಶ್- ಮಾಜಿ ಸಚಿವ
ಪುಟ್ಟರಾಜು – ಮಾಜಿ ಸಚಿವ
ಹರೀಶ್ ಗೌಡ – ಶಾಸಕ, ಜಟಿಡಿ ಪುತ್ರ
ಮಲ್ಲೇಶ್ ಬಾಬು – ಸಂಸದ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



