ರಾಜಕೀಯ

ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಸರ್ಕಾರದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಡಿ ಕೆ ಶಿವಕುಮಾರ್

ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಶಾಸಕ ಆರ್ ವಿ ದೇಶಪಾಂಡೆ ನಾನು ಕೂಡ ಮುಖ್ಯಮಂತ್ರಿಯಾಗಬಲ್ಲೆ, ಆದರೆ ಸಿದ್ದರಾಮಯ್ಯನವರು ಮನಸ್ಸು ಮಾಡಬೇಕು, ಅವರು ಸ್ಥಾನ ಬಿಟ್ಟುಕೊಡಬೇಕಷ್ಟೆ ಎಂದಿದ್ದರು.

ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಸರ್ಕಾರದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್
Published On :

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹುದ್ದೆ ಆಗಾಗ ಚರ್ಚೆಗೆ ಬರುತ್ತಿರುತ್ತದೆ. ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಕೆಲವು ಸದಸ್ಯರು, ಹಿರಿಯ ಶಾಸಕರು ಈ ಹಿಂದೆ ಸಾಕಷ್ಟು ಬಾರಿ ತಮ್ಮ ಇಂಗಿತ ವ್ಯಕ್ತಪಡಿಸಿದ್ದರು.

ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಶಾಸಕ ಆರ್ ವಿ ದೇಶಪಾಂಡೆ ನಾನು ಕೂಡ ಮುಖ್ಯಮಂತ್ರಿಯಾಗಬಲ್ಲೆ, ಆದರೆ ಸಿದ್ದರಾಮಯ್ಯನವರು ಮನಸ್ಸು ಮಾಡಬೇಕು, ಅವರು ಸ್ಥಾನ ಬಿಟ್ಟುಕೊಡಬೇಕಷ್ಟೆ ಎಂದಿದ್ದರು. ಇದು ಸಾಕಷ್ಟು ಸುದ್ದಿಯಾಗಿತ್ತು.

ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳು ಡಿಸಿಎಂ ಡಿ ಕೆ ಶಿವಕುಮಾರ್ ಅವರಲ್ಲಿ ಕೇಳಿದಾಗ, ಸರ್ಕಾರದಲ್ಲಿ ಸಿಎಂ ಹುದ್ದೆ ಖಾಲಿ ಇದ್ದಿದ್ದರೆ ಮಾತನಾಡಬಹುದಾಗಿತ್ತು. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ದೇಶಪಾಂಡೆಯವರಿಗೆ ಸಿಎಂ ಆಗಬೇಕೆಂಬ ಆಸೆ ಇರಬಹುದು, ತಪ್ಪಲ್ಲ ಎಂದರು.

ದೇಶವಾಂಡೆ ಅವರು ಪಕ್ಷದಲ್ಲಿ ಹಿರಿಯರಿದ್ದಾರೆ. ಅವರು ಆಸೆ ಪಡುವುದು ತಪ್ಪಲ್ಲ, ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡಲಾಗುವುದು ಎಂದು ಹೇಳಿದರು. 

ಮುಡಾ ಕೇಸಿನಲ್ಲಿ ಸಿದ್ದರಾಮಯ್ಯ ತಪ್ಪಿತಸ್ಥ ಎಂದು ತೀರ್ಮಾನವಾದರೆ ಹೇಗೆ ಎಂದು ಕೇಳಿದ್ದಕ್ಕೆ ಏನೂ ಆಗುವುದಿಲ್ಲ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಕೆಲಸ ಮಾಡುತ್ತಾರೆ ಎಂದರು.

ಮುಡಾ ವಿಚಾರದಲ್ಲಿ ನ್ಯಾಯಾಲಯದಲ್ಲಿ ಯಾವುದೇ ವ್ಯತಿರಿಕ್ತವಾಗುವುದಿಲ್ಲ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದು, ಅವರ ಕೆಲಸ ಮಾಡುತ್ತಾರೆ ಎಂದರು.

ಇದೇ ವೇಳೆ ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರರ್‌ ಹೇಳಿಕೆಗೆ ಉತ್ತರಿಸಿ, ಕಾಂಗ್ರೆಸ್‌ ನಲ್ಲಿದ್ದು, ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.