ಚಾಮರಾಜನಗರ: ಬಿಜೆಪಿಗೆ 'ಆಪರೇಷನ್ ಹಸ್ತ'ದ ಶಾಕ್; ಕಾಂಗ್ರೆಸ್ ಸೇರಿದ 6 ಸದಸ್ಯರು
ಬಿಜೆಪಿಯ 6 ಸದಸ್ಯರು ಕಾಂಗ್ರೆಸ್ ಸೇರ್ಪಡೆಯಿಂದ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. 13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಸದಸ್ಯರಿಗೆ ಕಾಂಗ್ರೆಸ್ ಗಾಳ ಹಾಕಿತ್ತು.

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಶಾಕ್ ನೀಡಿದ್ದು 6 ಮಂದಿ ಬಿಜೆಪಿ ಸದಸ್ಯರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಈ ದೊಡ್ಡ ಬೆಳವಣಿಗೆ ನಡೆದಿದೆ.
ಬಿಜೆಪಿಯ 6 ಸದಸ್ಯರು ಕಾಂಗ್ರೆಸ್ ಸೇರ್ಪಡೆಯಿಂದ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. 13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಸದಸ್ಯರಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಅದರಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇನ್ನು ಕಾಂಗ್ರೆಸ್ಗೆ ಬೆಂಬಲ ನೀಡಿದ ಬಿಜೆಪಿ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿರಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್ಗೆ ಬೆಂಬಲಿಸಿದ ಹೀನಾ ಕೌಸರ್ ನಾಮನಿರ್ದೇಶನ ಮಾಡಲಾಗಿದೆ. ಇನ್ನು ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



