ರಾಜಕೀಯ

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ ನಂತರ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ: ಸಿದ್ದರಾಮಯ್ಯಗೆ HDK

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ (ಭಾನುವಾರ) ಹಿನ್ನೆಲೆಯಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ ನಂತರ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ: ಸಿದ್ದರಾಮಯ್ಯಗೆ HDK
ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ ನಂತರ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್'ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ (ಭಾನುವಾರ) ಹಿನ್ನೆಲೆಯಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿಯವರು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?

ಸಿದ್ದರಾಮಯ್ಯ ಅವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ. ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ?ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.