ಗೋದ್ರಾ ಗಲಭೆ ಆಗಿದ್ದಾಗ ಮೋದಿ ರಾಜೀನಾಮೆ ನೀಡಿದ್ದರಾ?: ಸಿಎಂ ಸಿದ್ದರಾಮಯ್ಯ
ರಾಜ್ಯಪಾಲರು ಆಡಳಿತದಲ್ಲಿ ತಲೆಹಾಕಬಾರದು, ರಾಜ್ಯಪಾಲರ ಯಾವ ಪತ್ರಗಳಿಗೂ ಸಿಎಸ್ ಉತ್ತರಿಸಬಾರದು. ಎಲ್ಲಾ ಕಡೆಯು ಸಿಬಿಐ, ಇಡಿ, ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ.

ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರು ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗುವ ಸಾಧ್ಯತೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದಾರೆ.
ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಆಡಳಿತದಲ್ಲಿ ತಲೆಹಾಕಬಾರದು, ರಾಜ್ಯಪಾಲರ ಯಾವ ಪತ್ರಗಳಿಗೂ ಸಿಎಸ್ ಉತ್ತರಿಸಬಾರದು. ಎಲ್ಲಾ ಕಡೆಯು ಸಿಬಿಐ, ಇಡಿ, ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜಭವನ ದುರ್ಬಳಕೆಯಾಗುತ್ತಿದೆ. ನನ್ನ ರಾಜೀನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ. ನಾನು ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಸ್ಪಷ್ಟನೆ ನೀಡಿದರು.
ರಾಜ್ಯದ ಜನರು ನಮಗೆ ೫ ವರ್ಷ ಅಧಿಕಾರ ನಡೆಸಿ ಅಭಿವೃದ್ದಿ ಮಾಡಿ ಎಂದು ಅವಕಾಶ ನೀಡಿದ್ದಾರೆ .ಕೇಂದ್ರ ಸರ್ಕಾರ ರಾಜಭವನವನ್ನ ಹಾಗೂ ಎಲ್ಲಾ ಕಡೆ ಸಿಬಿಐ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.ತಮ್ಮ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾನು ಯಾಕೆ ರಾಜೀನಾಮೆ ಕೊಡಬೇಕು. ತಪ್ಪು ಮಾಡಿದ್ದರೇ ಮಾತ್ರ ರಾಜೀನಾಮೆ ಕೊಡಬೇಕು . ಗೋದ್ರಾ ಗಲಭೆ ಆಗಿದ್ದಾಗ ಮೋದಿ ರಾಜೀನಾಮೆ ನೀಡಿದ್ದರಾ ಎಫ್ ಐಆರ್ ಆಗಿ ಜಾಮೀನು ಪಡೆದಿರುವ ಹೆಚ್ಡಿಕೆ ಯಾಕೆ ರಾಜೀನಾಮೆ ಕೊಟ್ಟಿಲ್ಲ. ನಾನು ತಪ್ಪು ಮಾಡಿಲ್ಲ. ರಾಜೀನಾಮೆ ಕೊಡಲ್ಲ. ನನ್ನ ರಾಜೀನಾಮೆ ಕೇಳುವ ನೈತಿಕತೆ ಅವರಿಗಿದೆಯಾ ಎಂದು ಪ್ರಶ್ನಿಸಿದರು. ನಾನು ಕಾನೂನು ಹೋರಾಟ ಮುಂದುವರೆಸುತ್ತೇನೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಇಲ್ಲವೇ ಇಲ್ಲ ಎಂದರು.
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಾನು ಯಾಕೆ ರಾಜೀನಾಮೆ ಕೊಡಬೇಕು. ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ದಾರಾ? ಅವರಿಗೆ ಯಾವ ನೈತಿಕತೆ ಇದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



