ಹಿಂಡನ್ ಬರ್ಗ್ ವರದಿ, ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಮೌನ ಏಕೆ: ಸಿದ್ದರಾಮಯ್ಯ ಪ್ರಶ್ನೆ
ರಾಹುಲ್ ಗಾಂಧಿ ಈ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಅದರ ಬಗ್ಗೆ ಏಕೆ ಪ್ರಧಾನಿ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮೈಸೂರು: ಹಿಂಡನ್ ಬರ್ಗ್ ವರದಿ ಹಾಗೂ ಮಣಿಪುರ ಹಿಂಸಾಚಾರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರಶ್ನಿಸಿದ್ದಾರೆ. ಹರಿಯಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಗುರಿಯಾಗಿಸಿಕೊಂಡು ತಮ್ಮ ವಿರುದ್ಧದ ಮುಡಾ ಹಗರಣ ಪ್ರಸ್ತಾಪಿಸಿದ್ದ ಪ್ರಧಾನಿಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಬಿಜೆಪಿಯಲ್ಲಿ ಅನೇಕ ಭ್ರಷ್ಟರಿದ್ದಾರೆ. ಪ್ರಧಾನಿ ಮೋದಿ ಮೊದಲು ತಮ್ಮ ಪಕ್ಷದೊಳಗಿನ ವಿಷಯಗಳನ್ನು ಸರಿಪಡಿಸಲಿ ಎಂದು ಹೇಳಿದ ಮುಖ್ಯಮಂತ್ರಿ, ನರೇಂದ್ರ ಮೋದಿ ಅವರು ಹಿಂಡನ್‌ಬರ್ಗ್ ವರದಿ ಬಗ್ಗೆ ಏಕೆ ಮಾತನಾಡುವುದಿಲ್ಲ? ಮಣಿಪುರಕ್ಕೆ ಯಾಕೆ ಭೇಟಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.
ರಾಹುಲ್ ಗಾಂಧಿ ಈ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಅದರ ಬಗ್ಗೆ ಏಕೆ ಪ್ರಧಾನಿ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಬುಧವಾರ ಹರಿಯಾಣದ ಸೋನಿಪತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಆಡಳಿತದ ಕರ್ನಾಟಕವನ್ನು ಉದಾಹರಣೆಯಾಗಿ ಉಲ್ಲೇಖಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಭೂ ಹಗರಣದ ಆರೋಪ ಎದುರಿಸುತ್ತಿದ್ದಾರೆ ಮತ್ತು ಹೈಕೋರ್ಟ್ ಕೂಡ ಅವರ ವಿರುದ್ಧದ ತನಿಖೆ ಸರಿಯಾಗಿದೆ ಎಂದು ಹೇಳಿದ್ದರು.
ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಆರೋಪಗಳ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರು ಬರೀ ಸುಳ್ಳು ಹೇಳುತ್ತಾರೆ. ಅವರು ಹೇಳುವ ಎಲ್ಲದಕ್ಕೂ ನಾನು ಪ್ರತಿಕ್ರಿಯಿಸಲಾರೆ. ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



