ಸರ್ಕಾರ ಬೀಳಿಸಲು 1,200 ಕೋಟಿ ರೂ: ಯತ್ನಾಳ್ ಹೇಳಿಕೆ ಬಗ್ಗೆ ಐಟಿ, ಇಡಿ ತನಿಖೆಗೆ ಡಿಕೆಶಿ ಆಗ್ರಹ; ಕಾನೂನು ಹೋರಾಟಕ್ಕೂ ಸಿದ್ಧತೆ
ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಕಾನೂನು ತಂಡದ ಸಭೆ ಕರೆದಿದ್ದೇನೆ. 1,200 ಕೋಟಿ ರೂಪಾಯಿ ರೆಡಿಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಇದೆ ಎಂದರು.

ಬೆಂಗಳೂರು: ಬಿಜೆಪಿಯ ಹಿರಿಯ ಶಾಸಕರೊಬ್ಬರು ಕಾಂಗ್ರೆಸ್ ಸರ್ಕಾರ ಬೀಳಿಸಲು 1200 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ ಎಂದು ಹೇಳಿದ್ದು, ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ರೂಪಿಸಲಾಗಿದೆ, ಇದಕ್ಕಾಗಿ 1,200 ಕೋಟಿ ರೂ. ಹಣ ಮೀಸಲ ಇಡಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಇಂದು ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಕಾನೂನು ತಂಡದ ಸಭೆ ಕರೆದಿದ್ದೇನೆ. 1,200 ಕೋಟಿ ರೂಪಾಯಿ ರೆಡಿಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಇದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಈ ಮಾಹಿತಿಯನ್ನು ತಿಳಿಸಿದ್ದೇನೆ. ಇದು ತೆರಿಗೆ ಇಲಾಖೆ ಹಾಗೂ ಇಡಿ(ಜಾರಿ ನಿರ್ದೇಶನಾಲಯ) ತನಿಖೆಯ ವ್ಯಾಪ್ತಿಗೆ ಬರುವ ವಿಚಾರ. ದೂರು ನೀಡುವ ಸಂಬಂಧ ಇಂದು ಚರ್ಚೆ ಮಾಡುತ್ತೇವೆ ಎಂದರು.
ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಸಭೆಯನ್ನು ಕರೆದಿದ್ದೇನೆ. ಅವರು ನಮ್ಮ ಸರ್ಕಾರವನ್ನು ಉರುಳಿಸಲು 1,200 ಕೋಟಿ ರೂ. ಮೀಸಲಿಟ್ಟಿದ್ದಾರೆ. ನಾವು ನಮ್ಮ ಕಾನೂನು ತಂಡದೊಂದಿಗೆ ಚರ್ಚಿಸುತ್ತೇವೆ. ಈ ವಿಷಯವನ್ನು ಪಕ್ಷದ ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ವಿಷಯವನ್ನು ಆದಾಯ ತೆರಿಗೆ ಇಲಾಖೆಯಿಂದ ತನಿಖೆ ಮಾಡಬೇಕು. ಈ ಬಗ್ಗೆ ಕಾನೂನು ಏನು ಹೇಳುತ್ತದೆ ಎಂಬುದನ್ನು ತಿಳಿಯಲು ನಾನು ಕೆಪಿಸಿಸಿಯಲ್ಲಿ ಸಭೆ ಕರೆದಿದ್ದೇನೆ. ಅಲ್ಲದೆ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಭೇಟಿ ಮಾಡಿ, ಈ ಕುರಿತು ಕಾನೂನು ಆಯ್ಕೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದರು.
ಸರ್ಕಾರ ಬೀಳಿಸುವ ಷಡ್ಯಂತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಇದ್ದಾರೆ. ಬಿಜೆಪಿ ಹೈಕಮಾಂಡ್‌ಗೆ ಆಸಕ್ತಿಯಿಲ್ಲದಿದ್ದರೂ ಬಿಜೆಪಿಯೊಳಗಿನ ಕೆಲವು ವಿಭಾಗಗಳು ಆಪರೇಷನ್ ಕಮಲದ ಬಗ್ಗೆ ಯೋಚಿಸುತ್ತಿವೆ, "ಈ ಸಂಚಿನ ಬಗ್ಗೆ ನನಗೆ ಮಾಹಿತಿ ಇದೆ" ಎಂದು ಯತ್ನಾಳ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



