'ಪ್ರತಾಪ್ ಸಿಂಹ ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ: ಸಚಿವಗಿರಿ ಎಂದರೆ ಚಮಚಾಗಿರಿಯಲ್ಲ, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗಿಲ್ಲ'
ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ?

ಬೆಂಗಳೂರು: ವಿಕ್ರಂಸಿಂಹ ಮರ ಕಡಿದಿದ್ದರೆ FIR ನಲ್ಲಿ ಅವರ ಹೆಸರಿಲ್ಲ, ಯಾಕೆ!? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ. ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದ 'ನೀರೋ'ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಡಾ. ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ 'ಪರಿಪೂರ್ಣ ಸಹಕಾರ' ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆಎನ್ ರಾಜಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ.
ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ ಈ ಸಚಿವರಿಬ್ಬರು. 'ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ' ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು ಎಂದಿದ್ದಾರೆ.
ಶುಕ್ರವಾರ ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ.. ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಹೇಳಿ? ಆಗ ಕ್ರಮ ಜರುಗಿಸುವ ದಮ್ಮು ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ? ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ಫಿಕ್ಸ್ ಮಾಡುತ್ತೀರಾ? ನಾನು ಫಿಕ್ಸ್ ಮಾಡಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ: 'ಜೆಡಿಎಸ್ ಅಂತ್ಯಕ್ಕೆ ಆಡುತ್ತಿರುವ 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ: ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ'
ಸರಿ, ವಿಕ್ರಂಸಿಂಹ ಮರ ಕಡಿದಿದ್ದರೆ FIR ನಲ್ಲಿ ಅವರ ಹೆಸರಿಲ್ಲ, ಯಾಕೆ!? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ. ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಅಹಿಂದ ಅಹಿಂದ ಎಂದು ಬೆಳಗೆದ್ದರೆ ಭಜನೆ ಮಾಡುವ ನೀವು, ಆ ಅಧಿಕಾರಿಯಿಂದ ₹50 ಲಕ್ಷ ಕಿತ್ತ ನಿಮ್ಮ ನೀತಿಗೆಟ್ಟ ಹೊಲಸು ಶಾಸಕನ ಬಗ್ಗೆ ನಿಮ್ಮ ಮೌನ ಅಸಹ್ಯ. ನಿಮ್ಮದೇ ಲಜ್ಜೆಗೆಟ್ಟ ಸರಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್ ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ?
ಇದನ್ನೂ ಓದಿ: ತಳಮಟ್ಟದ ಸಮೀಕ್ಷೆಯಿಂದ ಹುಮ್ಮಸ್ಸು: ಹಳೆ ಮೈಸೂರು ಭಾಗದಲ್ಲಿ 4-5 ಸ್ಥಾನಗಳಿಗೆ 'ದಳಪತಿ'ಗಳ ಪಟ್ಟು ಸಾಧ್ಯತೆ!
ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ.ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮಾನ್ ಸಿದ್ದರಾಮಣ್ಣ!! ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


