ಅಗತ್ಯಬಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿ: ಕಳ್ಳಾಟವಾಡುತ್ತಿದ್ದ ಸಚಿವರಿಗೆ ಖಡಕ್ ವಾರ್ನಿಂಗ್!
ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.

ಬೆಂಗಳೂರು: ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಕೆಲವು ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಹಲವು ಕ್ಷೇತ್ರಗಳಲ್ಲಿ "ಗೆಲ್ಲಬಲ್ಲ" ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಲಾಗುತ್ತದೆ, ಹೀಗಾಗಿ ಕೆಹೆಚ್ ಮುನಿಯಪ್ಪ (ಏಳು ಬಾರಿ ಕೋಲಾರ ಸಂಸದ), ಕೆಎನ್ ರಾಜಣ್ಣ ಮತ್ತು ಬಿ ನಾಗೇಂದ್ರ ಅವರಂತಹ ಸಚಿವರನ್ನು ಕಣಕ್ಕಿಳಿಸಲು ಪಕ್ಷ ಮುಂದಾಗಬಹುದು ಎಂದು ತಿಳಿದು ಬಂದಿದೆ. ಅಂತಹ ಪರಿಸ್ಥಿತಿ ಎದುರಾದರೆ, ಸಚಿವರು ಸ್ಪರ್ಧಿಸಬೇಕಾಗುತ್ತದೆ ಎಂದು ಸೂಚಿಸಲಾಗಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಕೃಷ್ಣ ಬೈರೇಗೌಡ ಸ್ಪರ್ಧಿಸಿದ್ದನ್ನು ಸುರ್ಜೇವಾಲಾ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಆಗ ಗೌಡರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿದ್ದರು. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಮೂಡ್ ಇಲ್ಲದ ಸಚಿವರಿಗೆ ಸುರ್ಜೇವಾಲಾ ಅವರ ಎಚ್ಚರಿಕೆ ಆಘಾತ ತಂದಿದೆ ಎನ್ನಲಾಗಿದೆ.
ಕಾಂಗ್ರೆಸ್ ರಾಜ್ಯದ ಪ್ರತಿ ಲೋಕಸಭೆ ಕ್ಷೇತ್ರಕ್ಕೆ 28 ಸಚಿವರನ್ನು ಸಂಯೋಜಕರನ್ನಾಗಿ ನೇಮಿಸಿದ ಎರಡು ದಿನಗಳ ನಂತರ ಸುರ್ಜೇವಾಲಾ ಅವರಿಂದ ಸಂದೇಶ ಬಂದಿದ್ದು ಬಂದಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಚಿವರುಗಳ ಬಗ್ಗೆ ಚರ್ಚೆ ಇನ್ನೂ ನಡೆಯುತ್ತಿದೆ. ನವದೆಹಲಿಯಲ್ಲಿ ಅಂತಿಮ ಸ್ಪಷ್ಟತೆ ಸಿಗಬಹುದು ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


