'ಡಿಸೆಂಬರ್ ಒಳಗೆ ಡಿ.ಕೆ ಶಿವಕುಮಾರ್ ಸಿಎಂ ಆಗದಿದ್ದರೆ ನನ್ನ ಬಳಿ ಬಂದು ಕೇಳಿ': ಶಾಸಕ ಬಸವರಾಜ್ ಶಿವಗಂಗಾ
ಈಗ ಸದ್ಯಕ್ಕೆ ಏನು ಮಾತನಾಡಲ್ಲ, ಡಿಸೆಂಬರ್‌ವರೆಗೂ ಕಾದು ನೋಡಿ ಎಂದು ಹೇಳಿದ್ದಾರೆ.

ದಾವಣಗೆರೆ: ಡಿಸೆಂಬರ್ ಒಳಗೆ ಡಿ ಕೆ ಶಿವಕುಮಾರ್ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ, ಆಗದಿದ್ದರೆ ನನ್ನನ್ನು ಬಂದು ಕೇಳಿ ಎಂದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪುನರುಚ್ಛರಿಸಿದ್ದಾರೆ.
ಇತ್ತೀಚೆಗೆ ಡಿಸೆಂಬರ್ ಒಳಗೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗ್ತಾರೆ, ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗ್ತಾರೆ ಡಿಸೆಂಬರ್ ಒಳಗೆ ಸಿಎಂ ಚೇರ್ ಖಾಲಿ ಆಗದಿದ್ದರೆ ನನ್ನ ಬಂದು ಕೇಳಿ ಎಂದು ಈ ಹಿಂದೆ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈಗ ಸದ್ಯಕ್ಕೆ ಏನು ಮಾತನಾಡಲ್ಲ, ಡಿಸೆಂಬರ್‌ವರೆಗೂ ಕಾದು ನೋಡಿ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಕೇಳಿ ಬಂದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸದ್ಯ ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ. ಖಾಲಿಯಾದ ಮೇಲೆ ಯಾರಿಗೆ ಅರ್ಹತೆ ಇರುತ್ತೆ ಅವರು ಆಗ್ತಾರೆ. ಮಾಯಕೊಂಡ ಶಾಸಕ ಬಸವಂತಪ್ಪ ಅವರು ಕೂಡ ಆಗಬಹುದು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಮೆರವಣಿಗೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಅವರು ಮೊದಲು ಅದನ್ನು ನೋಡಿಕೊಳ್ಳಲಿ. ರಾಜ್ಯಕ್ಕೆ ಜಿಎಸ್‌ಟಿ ಪಾಲನ್ನು ಕೊಡುತ್ತಿಲ್ಲ, ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲಿ. ಬಿಜೆಪಿ ಸಂಸದರ ನಿಯೋಗ ತೆಗೆದುಕೊಂಡು ಹೋಗಿ ರಾಜ್ಯದ ಪಾಲು ಕೇಳಲಿ. ಅಧಿಕಾರಕ್ಕೆ ಬಂದಿಲ್ಲ ಎಂದು ಹತಾಶೆಯಿಂದ ಇದನ್ನೆಲ್ಲ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



