ಜಾತಿ ಜನಗಣತಿ ವರದಿ ಮೂಲಕ ಸಮಾಜ ಒಡೆಯಲು ಸಂಚು: ಸರ್ಕಾರದ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ
ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ ಪರಿಗಣಿಸಿರುವ ಜಾತಿ ಜನಗಣತಿ ವರದಿಯ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಅವರು, ಇದು ಸಮಾಜವನ್ನು ವಿಭಜಿಸುವ ಪಿತೂರಿಯಲ್ಲದೆ ಬೇರೇನೂ ಅಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಅವರು ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇದು ಎಲ್ಲಾ ಸಮುದಾಯಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಇದು ಜನಗಣತಿಯಲ್ಲ, ಆದರೆ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯದ ಒಂದು ಸಾಧನ ಎಂದು ಆರೋಪಿಸಿದರು.
ಸರ್ಕಾರದ ನಡೆ 66.35 ಲಕ್ಷ ಲಿಂಗಾಯತರು ಮತ್ತು 10.49 ಲಕ್ಷ ವೀರಶೈವ ಲಿಂಗಾಯತರನ್ನು ಬೇರ್ಪಡಿಸುವ ಮತ್ತು ಬಣಜಿಗ, ಗಾಣಿಗ, ಸಾದರ, ಉಪ್ಪಾರ, ಒಕ್ಕಲಿಗ, ಜಂಗಮ ಮುಂತಾದ ಉಪಪಂಗಡಗಳಾಗಿ ವಿಭಜಿಸುವ ಮೂಲಕ ಲಿಂಗಾಯತ ಸಮುದಾಯದ ಅಸ್ತಿತ್ವವನ್ನೇ ದುರ್ಬಲಗೊಳಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



