ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ 1: ಯೂಟರ್ನ್ ಹೊಡೆದ ಬಸವರಾಜ ರಾಯರೆಡ್ಡಿ ವಿರುದ್ಧ HDK ಕಿಡಿ
ಮಹಾತ್ಮ ಗಾಂಧೀಜಿ ಅವರ ಸತ್ಯಮೇವ ಜಯತೇ ಘೋಷ ವಾಕ್ಯವನ್ನು ಕಾಂಗ್ರೆಸ್ ನಾಯಕರು ಅದೆಷ್ಟು ಶ್ರದ್ಧಾಭಕ್ತಿಯಿಂದ ಪರಿಪಾಲನೆ ಮಾಡುತ್ತಿದ್ದಾರೆ ಎಂಬುದಕ್ಕೆ ರಾಯರೆಡ್ಡಿ ಅವರ ಹೇಳಿಕೆಯೇ ಸಾಕ್ಷಿ.

ಬೆಂಗಳೂರು: ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ 1 ಎಂದು ಹೇಳಿ ಇದೀಗ ಯೂಟರ್ನ್ ಹೊಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ವಿರುದ್ಧ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ರಾಯರೆಡ್ಡಿಯವರು ತಮ್ಮ ಹೇಳಿಕೆಯಿಂದ ಹಿಂದೆ ಸರಿಯುವ ಅಗತ್ಯವಿಲ್ಲ. ಅವರು ಸತ್ಯವನ್ನೇ ಹೇಳಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಸತ್ಯಮೇವ ಜಯತೇ ಘೋಷ ವಾಕ್ಯವನ್ನು ಕಾಂಗ್ರೆಸ್ ನಾಯಕರು ಅದೆಷ್ಟು ಶ್ರದ್ಧಾಭಕ್ತಿಯಿಂದ ಪರಿಪಾಲನೆ ಮಾಡುತ್ತಿದ್ದಾರೆ ಎಂಬುದಕ್ಕೆ ರಾಯರೆಡ್ಡಿ ಅವರ ಹೇಳಿಕೆಯೇ ಸಾಕ್ಷಿ ಎಂದು ವ್ಯಂಗ್ಯವಾಡಿದ್ದಾರೆ.
ಗುತ್ತಿಗೆಯಲ್ಲಿ ಪರ್ಸಂಟೇಜ್, ಕಮಿಷನ್ ದಂಧೆ ಆರಂಭಿಸಿದ್ದು ಅನ್ಯಪಕ್ಷಗಳ ಸರಕಾರಗಳೇ ಹೊರತು ಜೆಡಿಎಸ್ ಸರಕಾರವಲ್ಲ. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಗುತ್ತಿಗೆದಾರರಿಗೆ ನಿಯಮಿತವಾಗಿ ಹಣ ಪಾವತಿ ಆಗುತ್ತಿತ್ತು, ವಿಳಂಬ ಎನ್ನುವ ಪ್ರಶ್ನೆಯೇ ಇರಲಿಲ್ಲ. ನನ್ನ ಆಡಳಿತದಲ್ಲಿ ಕಮಿಷನ್ ದಂಧೆ ವಿಧಾನಸೌಧದ ಮೆಟ್ಟಿಲು ಮುಟ್ಟಲು ಬಿಟ್ಟಿರಲಿಲ್ಲ. ಸೋ ಕಾಲ್ಡ್ ಸತ್ಯಸಂಧರಾದ ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಳ್ಳಬೇಕು.
ಭ್ರಷ್ಟಾಚಾರದ ವಿರುದ್ಧ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಯರೆಡ್ಡಿ ಹೇಳಿದ್ದಾರೆ! ಪಾಪ.. ಅವರು ಏಕಿಷ್ಟು ಹೆದರಿದರು ಎನ್ನುವುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಅಧಿಕಾರ ಮತ್ತು ಆಸರೆ ನಾಲಿಗೆಯ ಶಕ್ತಿಯನ್ನು ಕುಂದಿಸುತ್ತವೆ. ಸನ್ಮಾನ್ಯ ಸಿಎಂ ಸಾಹೇಬರ ಸರಣಿ ಹಗರಣಗಳ ಸಿದ್ವಿಲಾಸಿ ಬಗ್ಗೆ ಅರಿಯದಷ್ಟು ಮುಗ್ಧರೇ ರಾಯರೆಡ್ಡಿ. ಕರ್ನಾಟಕವನ್ನು ಕೊಳ್ಳೆ ಹೊಡೆಯುತ್ತಿರುವ ಕಾಂಗ್ರೆಸ್ ಈಸ್ಟ್ ಇಂಡಿಯಾ ಕಂಪನಿ ಸರಕಾರದ ಭಾಗವಾಗಿರುವ ಅವರಿಗೆ ಜೆಡಿಎಸ್ ಕುರಿತು ಟೀಕಿಸುವ ನೈತಿಕತೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

Arey g***du: ಕೇಂದ್ರ ಸಚಿವ ಕಿಶನ್ ರೆಡ್ಡಿ ವಿರುದ್ಧ ಅಶ್ಲೀಲ, ನಿಂದನಾತ್ಮಕ ಪದ ಪ್ರಯೋಗ; ಕ್ರಮಕ್ಕೆ ಬಿಜೆಪಿ ಒತ್ತಾಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


