'ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ, ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ'!
ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಸಿಎಂ ಸಿದ್ದರಾಮಯ್ಯನವರೇ, ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು. ಕೆಟ್ಟ ಮೇಲಾದರೂ ತಮಗೆ ಬುದ್ಧಿ ಬಂತಲ್ಲ ಎನ್ನುವ ಸಮಾಧಾನ.

ಬೆಂಗಳೂರು: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ. ಇನ್ನು ಮುಂದಾದರೂ ತಮ್ಮ ಹೇಳಿಕೆಗಳಿಂದ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಸಲಹೆ ನೀಡಿದೆ.
ಪಹಲ್ಗಾಮ್ ಉಗ್ರರ ದಾಳಿ ಘಟನೆ ಕುರಿತು ಹೇಳಿಕೆ ನೀಡಿ ಭಾರೀ ಟೀಕೆಗೆ ಒಳಗಾಗಿ ನಂತರ ಮುಖ್ಯಮಂತ್ರಿಗಳು ಸಮರ್ಥನೆ ಕೊಟ್ಟ ಹಿನ್ನೆಲೆಯಲ್ಲಿ ಬಿಜೆಪಿ ಸಲಹೆ ನೀಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಸಿಎಂ ಸಿದ್ದರಾಮಯ್ಯ ನವರೇ, ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು. ಕೆಟ್ಟ ಮೇಲಾದರೂ ತಮಗೆ ಬುದ್ಧಿ ಬಂತಲ್ಲ ಎನ್ನುವ ಸಮಾಧಾನ ಒಂದು ಕಡೆಯಾದರೆ, ಓಲೈಕೆ ರಾಜಕಾರಣಕಾಗಿ ರಾಷ್ಟ್ರೀಯ ಭದ್ರತೆ ವಿಷಯದಲ್ಲೂ ರಾಜಿ ಮಾಡಿಕೊಳ್ಳಲು ಹೇಸುವುದಿಲ್ಲವಲ್ಲ ಎಂಬ ಆತಂಕ ಮತ್ತೊಂದು ಕಡೆ.
ತಮ್ಮ ಬಾಲಿಶ ಹೇಳಿಕೆ ಶತ್ರುರಾಷ್ಟ್ರದ ಷಡ್ಯಂತ್ರ, ಕುತಂತ್ರಕ್ಕೆ ಆಹಾರವಾಯಿತು, ತಮ್ಮ ಬೇಜವಾಬ್ದಾರಿ ಹೇಳಿಕೆ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟುಮಾಡಿತು ಎಂಬ ವಾಸ್ತವದ ಅರಿವು ತಮಗಾಗಿದೆ ಎಂದು ಭಾವಿಸುತ್ತೇನೆ.
ಇನ್ನು ಮುಂದಾದರೂ ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಿ. ತಮ್ಮ ಸ್ಥಾನಕ್ಕೆ ತಕ್ಕಂತಹ ಗಾಂಭೀರ್ಯತೆ, ಸಮಯ ಪ್ರಜ್ಞೆ, ಮುತ್ಸದ್ದಿತನ ರೂಢಿಸಿಕೊಳ್ಳಿ. ಇನ್ನು ಮುಂದಾದರೂ ತಮ್ಮ ಹೇಳಿಕೆಗಳಿಂದ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದು ಸಲಹೆ ನೀಡಿದ್ದಾರೆ.

ಪಾಕಿಸ್ತಾನ ಮೇಲೆ ಯುದ್ಧ ಬೇಡ ಎಂದು ನಾನು ಹೇಳಿಲ್ಲ: ವರಸೆ ಬದಲಿಸಿದ ಸಿದ್ದರಾಮಯ್ಯ; ಡಿ.ಕೆ ಶಿವಕುಮಾರ್ ಹೇಳಿದ್ದೇನು?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


