KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಇಲ್ಲಸಲ್ಲದ ಮಾತು ಬಿಟ್ಟು ಉತ್ತಮ ಆಡಳಿತ ನೀಡಿ; ಮಹದೇವಪ್ಪಗೆ ಯದುವೀರ್ ತಿರುಗೇಟು
ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ ಸಾಕ್ಷಿ ಎಲ್ಲಿಯೂ ಇಲ್ಲ. ಸಾಮಾನ್ಯವಾಗಿ ಇತಿಹಾಸದ ಬಗ್ಗೆ ಉಲ್ಲೇಖ ಮಾಡಬೇಕಾದರೆ ಸಾಕ್ಷಿ ಅವಶ್ಯ.

ಮೈಸೂರು: ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ ವಿರುದ್ಧ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ಎಸ್ ಅಣೆಕಟ್ಟೆಗೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಹೇಳಿದರು.
ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ ಸಾಕ್ಷಿ ಎಲ್ಲಿಯೂ ಇಲ್ಲ. ಸಾಮಾನ್ಯವಾಗಿ ಇತಿಹಾಸದ ಬಗ್ಗೆ ಉಲ್ಲೇಖ ಮಾಡಬೇಕಾದರೆ ಸಾಕ್ಷಿ ಅವಶ್ಯ. ಅಗತ್ಯಕ್ಕೆ ತಕ್ಕಂತೆ ನಿರೂಪಣೆ ಮಾಡಿಕೊಳ್ಳುವುದು ಸರಿಯಲ್ಲ. ಕೆಆರ್ಎಸ್ ಕಟ್ಟಿದ್ದು ಯಾರು, ಅದಕ್ಕೆ ಅಡಿಗಲ್ಲು ಹಾಕಿದ್ದು ಯಾರೆಂಬುದು ಎಲ್ಲರಿಗೂ ಗೊತ್ತಿದೆ.
ಕನ್ನಂಬಾಡಿ ಅಣೆಕಟ್ಟೆ ಪ್ರಾರಂಭದಿಂದ ಕೊನೆಯವರೆಗೆ ಏನೆಲ್ಲ ಆಯಿತು, ಶ್ರಮವಹಿಸಿದ್ದು ಯಾರು ಎಂಬುದು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ. ಸಚಿವ ಮಹದೇವಪ್ಪ ಇಲ್ಲದ ಇತಿಹಾಸದ ಬಗ್ಗೆ ಮಾತನಾಡುವ ಬದಲು ರಾಜ್ಯದಲ್ಲಿ ಜನರಿಗೆ ಒಳ್ಳೆಯ ಆಡಳಿತ ನೀಡಲಿ ಎಂದು ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



