ರಾಜಕೀಯ

ಡಿ.ಕೆ ಶಿವಕುಮಾರ್ 'ಮಹಾನ್ ಕಲಾವಿದ'; ಅವರಿಂದ ಪಾಠ ಕಲಿಯಬೇಕಾದ ಅಗತ್ಯವಿದೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ? Video

ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಡಿ.ಕೆ ಶಿವಕುಮಾರ್ 'ಮಹಾನ್ ಕಲಾವಿದ'; ಅವರಿಂದ ಪಾಠ ಕಲಿಯಬೇಕಾದ ಅಗತ್ಯವಿದೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ? Video
ಡಿಕೆ ಶಿವಕುಮಾರ್, ವಿಜಯೇಂದ್ರ
Published On :

ಬೆಂಗಳೂರು: ಕಾಂಗ್ರೆಸ್ ರಾಜ್ಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ 'ಆರ್‌ಎಸ್‌ಎಸ್' ಗೀತೆ ಹಾಡಿರುವುದು ವ್ಯಾಪಕ ಚರ್ಚೆ ಹಾಗೂ ಅಚ್ಚರಿಗೆ ಕಾರಣವಾಗಿದೆ.

ವಿಧಾನಸಭೆ ಕಲಾಪದ ವೇಳೆ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ.ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತು ಸುದ್ದಿಸಂಸ್ಥೆ ಎಎನ್ ಐ ಜೊತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಡಿಕೆ ಶಿವಕುಮಾರ್ 'ಮಹಾನ್ ಕಲಾವಿದ' ಎಂದಿದ್ದಾರೆ.

ವಿಧಾನಸಭೆಯ ಒಳಗಡೆ ಹಾಗೂ ಹೊರಗಡೆ ಮಾತನಾಡುವುದರಲ್ಲಿ ಅವರು ಎಕ್ಸ ಪರ್ಟ್ ಆಗಿದ್ದಾರೆ. ಇದನ್ನು ಅವರಿಂದ ನಾವು ಪಾಠ ಕಲಿಯಬೇಕಾದ ಅಗತ್ಯವಿದೆ. ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದಾರೆ. ಆದರೆ ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.