ರಾಜಕೀಯ

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಬೇಕು ಎಂದು ಬಿಕೆ ಹರಿಪ್ರಸಾದ್ ಅವರು ಒತ್ತಾಯಿಸಿದ್ದರು.

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್
ಡಿಕೆ ಶಿವಕುಮಾರ್-ಬಿಕೆ ಹರಿಪ್ರಸಾದ್
Published On :

ಬೆಂಗಳೂರು: ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆ ಹಾಡಿದ್ದಕ್ಕಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಿರುವುದನ್ನು ಸ್ವಾಗತಿಸಿದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಪಕ್ಷದಲ್ಲಿ ಯಾರೂ ಸಂಘವನ್ನು ಯಾವುದೇ ರೀತಿಯಲ್ಲೂ "ಸಮರ್ಥಿಸಿಕೊಳ್ಳಬಾರದು" ಎಂದು ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಬೇಕು ಎಂದು ಬಿಕೆ ಹರಿಪ್ರಸಾದ್ ಅವರು ಒತ್ತಾಯಿಸಿದ್ದರು.

"ಕಾಂಗ್ರೆಸ್ ಪಕ್ಷವನ್ನು ನಾನು ಅಥವಾ ಡಿ.ಕೆ. ಶಿವಕುಮಾರ್ ಕಟ್ಟಿಲ್ಲ. ಭವಿಷ್ಯಕ್ಕಾಗಿ ಅದನ್ನು ಉಳಿಸಲು ಯಾರೋ ನಮಗೆ ನೀಡಿದ್ದಾರೆ, ನಮಗೆ ಶಕ್ತಿ ಇದ್ದರೆ, ನಾವು ಅದನ್ನು ಉಳಿಸಿ ಭವಿಷ್ಯದ ಪೀಳಿಗೆಗೆ ನೀಡಬೇಕಾಗುತ್ತದೆ. ಇಲ್ಲಿ ಯಾರೂ ಶಾಶ್ವತವಲ್ಲ, ಯಾರೂ 500 ವರ್ಷಗಳ ಕಾಲ ಬದುಕುವುದಿಲ್ಲ" ಎಂದು ಹರಿಪ್ರಸಾದ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಮಹಾತ್ಮ ಗಾಂಧಿಯನ್ನು ಕೊಂದ ಸಂಘಟನೆಯ ಹಾಡು ಹಾಡಿದ್ದಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ.

"ಪಕ್ಷದ ಅಧ್ಯಕ್ಷರಾಗಿರುವ ಅವರು(ಶಿವಕುಮಾರ್) ಅಂತಹ ಮಾತುಗಳನ್ನು ಹೇಳಬಾರದಿತ್ತು. ಉಪಮುಖ್ಯಮಂತ್ರಿಯಾಗಿ ಅವರು ಅದನ್ನು ಪಠಿಸಿದರೆ ನನಗೆ ಯಾವುದೇ ಆಕ್ಷೇಪವಿಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್, ಸಂವಿಧಾನ ಮತ್ತು ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್‌ಎಸ್‌ಎಸ್‌ನ ಪ್ರಾರ್ಥನೆ ಹಾಡು ಹಾಡುವ ಅಗತ್ಯವಿಲ್ಲ ಎಂದಿದ್ದಾರೆ.

ಪಕ್ಷದೊಳಗಿನ ಟೀಕೆಗಳಿಂದ ತೀವ್ರ ಬೇಸರಗೊಂಡಿರುವ ಡಿಕೆ ಶಿವಕುಮಾರ್, ರಾಜ್ಯ ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆ "ನಮಸ್ತೆ ಸದಾ ವತ್ಸಲೆ..." ಹಾಡು ಹಾಡಿದ್ದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಮಂಗಳವಾರ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.