JDS ಕೋರ್ ಕಮಿಟಿ ಸಭೆ: ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗಳ ಕುರಿತು ಚರ್ಚೆ
ಜನವರಿಯಿಂದ ಪ್ರತಿ ವಾರ ಮೂರು ಜಿಲ್ಲೆಗಳಿಗೆ ಭೇಟಿ ನೀಡುವ ಬಗ್ಗೆಯೂ ಚರ್ಚಿಸಲಾಗಿದೆ. ಈ ಕುರಿತು ದಿನಾಂಕಗಳನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುವುದು.

ಬೆಂಗಳೂರು: ಜಾತ್ಯಾತೀತ ಜನತಾ ದಳ ಪಕ್ಷದ ರಾಜ್ಯ ಕೋರ್ ಸಮಿತಿ ಸಭೆ ಬುಧವಾರ ನಡೆದಿದ್ದು, ಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿ ಹೊಸದಾಗಿ ರಚನೆಯಾದ ಐದು ಪಾಲಿಕೆ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯ ಕೋರ್ ಸಮಿತಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರು, ಪಕ್ಷದ ಸಂಘಟನೆಯನ್ನು ಬಲಪಡಿಸಲು ಜಿಲ್ಲಾ ಪ್ರವಾಸಗಳನ್ನು ಕೈಗೊಳ್ಳುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.
ಜನವರಿಯಿಂದ ಪ್ರತಿ ವಾರ ಮೂರು ಜಿಲ್ಲೆಗಳಿಗೆ ಭೇಟಿ ನೀಡುವ ಬಗ್ಗೆಯೂ ಚರ್ಚಿಸಲಾಗಿದೆ. ಈ ಕುರಿತು ದಿನಾಂಕಗಳನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುವುದು. ಭವಿಷ್ಯದ ಕ್ರಮಗಳ ಕುರಿತು ಚರ್ಚಿಸಲು ಡಿಸೆಂಬರ್ 22 ರಂದು ಬೆಂಗಳೂರಿನಲ್ಲಿ ಜಿಲ್ಲಾಧ್ಯಕ್ಷರ ಸಭೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಬಿಎಯಲ್ಲಿ ನಡೆಯುವ ಪಾಲಿಕೆ ಚುನಾವಣೆಯಲ್ಲಿ ಹಲವು ವಾರ್ಡ್‌ಗಳಿಂದ ಸ್ಪರ್ಧಿಸಲು ಒತ್ತು ನೀಡಲಾಗುತ್ತದೆ. ಐದು ಪಾಲಿಕೆಗಳಲ್ಲಿ ಮೈತ್ರಿ ಪಕ್ಷ ಬಹುಮತ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



