ರಾಜಕೀಯ

ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ಇದೇ ವೇಳೆ ನಾನು 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಕೆಎನ್‌ ರಾಜಣ್ಣ ಅವರು ಘೋಷಿಸಿದ್ದಾರೆ.

ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ
ಕೆಎನ್ ರಾಜಣ್ಣ
Published On :

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್​​ ರಾಜಣ್ಣ ಅವರು ಶನಿವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎನ್ ರಾಜಣ್ಣ ಅವರು, ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ. ನನಗೆ ಸಾಕು, ಇನ್ನೊಬ್ಬರಿಗೆ ಅವಕಾಶ ಕೊಡಲಿ ಎಂದರು.

ಈ ವೇಳೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆಯೇ ಎಂದು ವರದಿಗಾರರ ಪ್ರಶ್ನಿಸಿದಾಗ ಗರಂ ಆದ ರಾಜಣ್ಣ, ಒಂದು ವೇಳೆ ಡಿಕೆ ಶಿವಕುಮಾರ್​​ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ. ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಅವರು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ನನಗೆ ಅಧಿಕಾರದ ದಾಹ ಇಲ್ಲ ಎಂದರು. ಇದೀಗ ರಾಜಣ್ಣ ಅವರ ಈ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.

ಸಿಎಂ ಮತ್ತು ಡಿಸಿಎಂ ದುಬಾರಿ ವಾಚ್‌ಗಳ ಕುರಿತು ವಿರೋಧ ಪಕ್ಷದ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ವಿರೋಧ ಪಕ್ಷದವರಿಗೆ ವಿರೋಧ ಮಾಡೋಕೆ ಬೇರೆ ವಿಚಾರ ಇಲ್ಲ. ವಾಚ್ ಬಗ್ಗೆ, ಊಟಕ್ಕೆ ಹೋದರೂ ಆರೋಪ ಮಾಡುತ್ತಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಅಂತಾ ಮನವಿ ಮಾಡುತ್ತೇನೆ ಎಂದರು.

ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ

ಇದೇ ವೇಳೆ ನಾನು 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಕೆಎನ್‌ ರಾಜಣ್ಣ ಅವರು ಘೋಷಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.