'ಅಸಮರ್ಥರನ್ನು ಅಸಮರ್ಥ ಎನ್ನದೇ ಜಗದೇಕ ವೀರ ಎನ್ನಬೇಕೆ? ಮತ್ತೆ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಅಸಮರ್ಥರನ್ನು ಅಸಮರ್ಥ ಎನ್ನದೇ ಜಗದೇಕ ವೀರ ಎನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶುಕ್ರವಾರ ಸದನದಲ್ಲಿ 'ನಾಲಾಯಕ್ ಹೋಮ್ ಮಿನಿಸ್ಟರ್'ಎಂದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು ಅಸಮರ್ಥ ನಾಯಕ ಎಂದು ಕರೆದಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಸಮರ್ಥರನ್ನು ಅಸಮರ್ಥ ಎನ್ನದೇ ಜಗದೇಕ ವೀರ ಎನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.
ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ ಮತ್ತು ಯಾರ ಅಸಾಮರ್ಥ್ಯದಿಂದ ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದಿದ್ದಾರೆ.
ಬಾಂಗ್ಲಾ ವಲಸಿಗರು ದೇಶದ ಗಡಿ ದಾಟಿ ಬರುವಂತಾಗಿದ್ದು ಕೇಂದ್ರ ಗೃಹ ಸಚಿವರ ವೈಫಲ್ಯವಲ್ಲವೇ? ದೆಹಲಿಯ ಕೆಂಪು ಕೋಟೆ ಬಳಿಯೇ ಸ್ಫೋಟವಾಗುತ್ತದೆ ಎಂದರೆ ಅದು ಕೇಂದ್ರ ಗೃಹ ಸಚಿವರ ಅಸಾಮರ್ಥ್ಯವಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ.
ಪೆಹಲ್ಗಾಮ್ ದಾಳಿಯಾಗುವಾಗ ಅಮಿತ್ ಶಾ ಅವರ ಚಾಣಾಕ್ಷತನ ಎಲ್ಲಿ ಅಡಗಿತ್ತು? ವರ್ಷಗಳ ಕಾಲ ಮಣಿಪುರದಲ್ಲಿ ದಂಗೆ ನಡೆಯುತ್ತಿದ್ದುದ್ದನ್ನು ಸುಮ್ಮನೆ ನೋಡುತ್ತಾ ಕುಳಿತಿದ್ದನ್ನು ಆಸಾಮರ್ಥ್ಯ ಎನ್ನಬೇಕೋ ಪರಾಕ್ರಮ ಎನ್ನಬೇಕೋ?
ಮಹಿಳೆಯರ ಬೆತ್ತಲೆ ಮೆರವಣಿಗೆಯಿಂದ ಇಡೀ ಜಗತ್ತಿನ ಎದುರು ದೇಶದ ಘನತೆ ಮಣ್ಣುಪಾಲಾದಾಗ ಕಣ್ಮುಚ್ಚಿ ಕುಳಿತಿದ್ದು ಆಸಾಮರ್ಥ್ಯವಲ್ಲದೆ ಇನ್ನೇನು? ಎಂದು ಪ್ರಶ್ನಿಸಿದ್ದಾರೆ.
ಅಮಿತ್ ಶಾ ಅವರ ಸಾಮರ್ಥ್ಯ, ಪರಾಕ್ರಮಗಳಿರುವುದು ಬಿಜೆಪಿಯೇತರ ಸರ್ಕಾರಗಳನ್ನು ಉರುಳಿಸುವುದರಲ್ಲಿ ಮತ್ತು ICCಯನ್ನು ಸಮೃದ್ಧಗೊಳಿಸುವುದರಲ್ಲಿ ಮಾತ್ರವೇ? ಪ್ರಮೋಷನ್ ಗಾಗಿ, ಅಸ್ತಿತ್ವಕ್ಕಾಗಿ ಅಮಿತ್ ಶಾ ಅವರನ್ನು ಸ್ಪರ್ಧೆಗೆ ಬಿದ್ದವರಂತೆ ಸಮರ್ಥಿಸಿಕೊಳ್ಳುವುದು ರಾಜ್ಯದ ಬಿಜೆಪಿ ನಾಯಕರಿಗೆ ಅನಿವಾರ್ಯ ಎಂಬ ಸಂಗತಿ ನಮಗೂ ತಿಳಿದಿದೆ, ಜನತೆಗೂ ತಿಳಿದಿದೆ. ಮಹಾತ್ಮ ಗಾಂಧಿ, ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ದೇಶ ಕಟ್ಟಿದ ನಾಯಕರ ಬಗ್ಗೆಯೇ ಅಸಂಸದೀಯ ಭಾಷೆಯ ಮೂಲಕ ನಾಲಿಗೆ ಹರಿಬಿಡುವ ರಾಜ್ಯ ಬಿಜೆಪಿ ನಾಯಕರು ಇಂದು “ಆಸಮರ್ಥ“ ಎಂಬ ಪದವನ್ನು ಸಹಿಸಲಾಗದೆ ಒದ್ದಾಡುತ್ತಿರುವುದು ಅವರ ಶೋಚನಿಯ ಸ್ಥಿತಿಗೆ ಹಿಡಿದ ಕನ್ನಡಿ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



