Hate Speech Bill: ದ್ವೇಷ ಭಾಷಣ ವಿಧೇಯಕ ತಡೆಹಿಡಿಯುವಂತೆ ರಾಜ್ಯಪಾಲರಿಗೆ ಯತ್ನಾಳ ಪತ್ರ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಯತ್ನಾಳ್ ಅವರು, ರಾಜ್ಯ ಸರ್ಕಾರ ಅಂಗೀಕರಿಸಿರುವ ದ್ವೇಷ ಭಾಷಣ ತಡೆ ಕಾಯ್ದೆಗೆ ಸಹಿ ಹಾಕದಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿರೋಧಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸೋಮವಾರ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಯತ್ನಾಳ್ ಅವರು, ರಾಜ್ಯ ಸರ್ಕಾರ ಅಂಗೀಕರಿಸಿರುವ ದ್ವೇಷ ಭಾಷಣ ತಡೆ ಕಾಯ್ದೆಗೆ ಸಹಿ ಹಾಕದಂತೆ ಮನವಿ ಮಾಡಿದ್ದಾರೆ.
ಜನತೆಯ ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ, 2025ಗೆ ಸಹಿ ಹಾಕದೆ ತೆಹಿಡಿಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಸದರಿ ವಿಧೇಯಕವನ್ನು ಬಳಸಿ ರಾಜಕೀಯ ವಿರೋಧಿಗಳನ್ನು ದಮನಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮೇಲಾಗಿ ಈಗಾಗಲೇ ಭಾರತೀಯ ನ್ಯಾಯ ಸಂಹಿತೆಯಲ್ಲಿ(BNS) ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇರುವುದರಿಂದ, ಇದಕ್ಕೆ ಪ್ರತ್ಯೇಕ ವಿಧೇಯಕ ಅವಶ್ಯವಿರುವುದಿಲ್ಲ ಎಂದಿದ್ದಾರೆ.
ಸರ್ಕಾರದ ವಿರುದ್ಧ ಜನತೆ, ಸಂಘಟನೆಗಳು ಮಾಡುವ ರಚನಾತ್ಮಕ ಟೀಕೆಗಳನ್ನು ಶಿಕ್ಷಾರ್ಹ ಅಪರಾಧವಾಗಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸುವ ಪ್ರಯತ್ನ ಇದಾಗಿದೆ ಎಂದು ಯತ್ನಾಳ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



