ರಾಜಕೀಯ

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ನಾಯಕತ್ವ ಗೊಂದಲ 'ಮಾಧ್ಯಮಗಳ ಸೃಷ್ಟಿ': ಡಿಕೆಶಿ

ಪರಿಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ನೀವು(ಮಾಧ್ಯಮ) ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದೀರಿ. ನಾನು ಏನು ಹೇಳಬೇಕೊ ಅದನ್ನು ಹೇಳಿದ್ದೇನೆ.

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ನಾಯಕತ್ವ ಗೊಂದಲ 'ಮಾಧ್ಯಮಗಳ ಸೃಷ್ಟಿ': ಡಿಕೆಶಿ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
Published On :

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಇದರಲ್ಲಿ ಬಗೆಹರಿಸಿಕೊಳ್ಳುವಂಥದ್ದು ಏನಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.

ಇಂದು ನಗರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಇದು ಸ್ಥಳೀಯ ಮಟ್ಟದಲ್ಲೇ ಇದ್ದು, ಸ್ಥಳೀಯ ನಾಯಕರೇ ಇದನ್ನ ಬಗೆಹರಿಸಿಕೊಳ್ಳಬೇಕು ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಪಕ್ಷದೊಳಗೆ ಪರಿಹರಿಸಿಕೊಳ್ಳುವಂತಹ ಯಾವುದೇ ಸಮಸ್ಯೆಗಳಿಲ್ಲ, ಇದು ಕೇವಲ "ಮಾಧ್ಯಮಗಳ ಸೃಷ್ಟಿ" ಎಂದರು.

"ಪರಿಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ನೀವು(ಮಾಧ್ಯಮ) ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದೀರಿ. ನಾನು ಏನು ಹೇಳಬೇಕೊ ಅದನ್ನು ಹೇಳಿದ್ದೇನೆ. ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಖರ್ಗೆ ಅವರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ..." ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ನೀವು ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚಿಂತಿಸಬೇಡಿ ಎಂದು ಡಿಸಿಎಂ ಮಾಧ್ಯಮಗಳಿಗೆ ಸಲಹೆ ನೀಡಿದರು.

ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ "ಹೈಕಮಾಂಡ್ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?". ಹೈಕಮಾಂಡ್ ಅನ್ನು ದೂಷಿಸುವ ಬದಲು ಸ್ಥಳೀಯ ನಾಯಕರು ಆಂತರಿಕ ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ಅವರು ನಿನ್ನೆ ತಾಕೀತು ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.