ಡಿ.ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ: ರಾಜಣ್ಣ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಷ್ಟೇ ಯತ್ನಿಸಿದರೂ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಭಾನುವಾರ ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದರು.
ಡಿಕೆ ಶಿವಕುಮಾರ್ ಭೇಟಿ ಮಾಡಿದ್ದರು. ಅವರೇನು ಹುಡುಕಿಕೊಂಡು ಬಂದಿರಲಿಲ್ಲ. ಅವರು ಪಾರ್ಟಿ ಅಧ್ಯಕ್ಷರು ಮಾತನಾಡುತ್ತಾರೆ. ಯಾರನ್ನೂ ಬೇಕಾದರೂ ಮಾತಾಡಿಸಬಹುದು. ಪಕ್ಷ ಸಂಘಟನೆ ವಿಚಾರವಾಗಿ ಭೇಟಿ ಮಾಡಿದ್ದರು. ಪಕ್ಷ ಸಂಘಟನೆ ಮಾಡೋಣ ಎಂದರು, ನಾನು ಆಯಿತು ಅಂದೆ. ಅದರ ಹೊರತಾಗಿ ಬೇರೆ ಯಾವುದೇ ವಿಚಾರಗಳು ಚರ್ಚೆ ಆಗಿಲ್ಲ ಎಂದು ಹೇಳಿದರು.
ನಮ್ಮ ನಿಲುವು ಸಿದ್ದರಾಮಯ್ಯ ಪರವಾಗಿಯೇ ಇದೆ. ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಮನೆಗೆ ಎಲ್ಲರೂ ಊಟಕ್ಕೆ ಹೋಗಿದ್ದರು. ಅದು ರಾಜಕೀಯ ಅಲ್ಲ. ಅದೊಂದು ಸೌಜನ್ಯಕ್ಕೆ ಅಷ್ಟೆ. ಸಿಎಂ ವಿಚಾರವನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಸಿಎಂ ಕೂಡ ನಾನೇ 5 ವರ್ಷ ಇರ್ತೀನಿ ಅಂತ ಪದೇ ಪದೇ ಹೇಳಿದ್ದಾರೆ. ಹೈಕಮಾಂಡ್ ಹೇಳುವವರೆಗೆ ನಾನು ಕಾಯುತ್ತೇನೆಂದು ತಿಳಿಸಿದರು.
ನಾನು ಈ ಹಿಂದೆ ನೀಡಿದ ಹೇಳಿಕೆಗಳಿಗೆ ಈಗಲೂ ಬದ್ಧ. ನಾನು ಸಿದ್ದರಾಮಯ್ಯ ಪರವೇ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಡಿ.ಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಗಳಿಗೆ ನಾನು ಬದ್ಧ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



