ಅಧಿಕಾರ ಶಾಶ್ವತವಲ್ಲ; ತಮ್ಮ ತಂದೆಯ ಇಚ್ಛೆಯಂತೆಯೇ ನಡೆಯುವೆ: ಯತೀಂದ್ರ ಸಿದ್ದರಾಮಯ್ಯ
ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಬಗ್ಗೆ ನಾನು ಈಗಾಗಲೇ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ಮತ್ತೊಮ್ಮೆ ನಾನು ಏನನ್ನೂ ಹೇಳಬೇಕಿಲ್ಲ.

ಚಿಕ್ಕೋಡಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ ಪ್ರತಿಕ್ರಿಯೆ ನೀಡದೇ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದರು.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕವಲಗುಡ್ಡ ಗ್ರಾಮದಲ್ಲಿ ನಡೆದ ಖಾಸಗಿ ಶಾಲೆಯ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿದ್ದ ಅವರು, ಸುದ್ದಿಗಾರರ ಪ್ರಶ್ನೆಗಳಿಗೆ ಅತೀ ಜಾಗರೂಕತೆಯಿಂದ ಉತ್ತರಿಸಿದರು. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಬಗ್ಗೆ ನಾನು ಈಗಾಗಲೇ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ಮತ್ತೊಮ್ಮೆ ನಾನು ಏನನ್ನೂ ಹೇಳಬೇಕಿಲ್ಲ. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಅಧಿಕಾರ ಯಾರಿಗೂ ಶಾಶ್ವತವಲ್ಲ ಹೀಗಾಗಿ ಈ ವಿಚಾರದಲ್ಲಿ ನಾನು ಹೆಚ್ಚಿಗೆ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಪೂರ್ಣವಿರಾಮ ಇಡಲು ಪ್ರಯತ್ನಿಸಿದರು. ಈ ಹಿಂದೆ 'ಐದು ವರ್ಷ ನಮ್ಮಪ್ಪನೇ ಸಿಎಂ' ಎಂದು ಹೇಳಿಕೆ ನೀಡುವ ಮೂಲಕ ಯತೀಂದ್ರ ಅವರು ಪಕ್ಷದೊಳಗೆ ಆಂತರಿಕ ಸಂಘರ್ಷಕ್ಕೆ ಕಾರಣವಾಗಿದ್ದರು.
ಹಿಂದುಳಿದವರ, ದೀನ ದಲಿತರ, ಅಲ್ಪಸಂಖ್ಯಾತರ ಶ್ರೇಯಸ್ಸಿಗಾಗಿ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲಿರುಳು ಶ್ರಮಿಸುತ್ತಿದ್ದು ಅವರ ಇಚ್ಛೆಯಂತೆ ತಾವು ಕೂಡಾ ನಡೆಯುವುದಾಗಿ, ಅಹಿಂದ ಜನರ ಪರವಾಗಿ ಶ್ರಮಿಸುವುದಾಗಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

'ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ': ಸಿಎಂ ಪುತ್ರ ಯತೀಂದ್ರ ಪುನರುಚ್ಛಾರ; ಡಿಸಿಎಂ ಡಿಕೆಶಿ ಹೇಳಿದ್ದೇನು?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


