ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2028 ರವರೆಗೂ ಇರಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಭವಿಷ್ಯ
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು 2028ರವರೆಗೆ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚುತ್ತಿರುವ ಅತೃಪ್ತಿಯೇ ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ 2028 ರವರೆಗೂ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ, ಇದು ಯಾವಾಗ ಸ್ಫೋಟಗೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ, ಆದರೆ ಕಾದು ನೋಡೋಣ. ಪ್ರತಿಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಹೇಳುವುದು ಸರಿಯಲ್ಲ ಎಂದರು.
'ನಾವು ಅವರ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿರುವುದು ನಿಜವಲ್ಲ; ಅವರ ಶಾಸಕರು ಮತ್ತು ಜನರೇ ಈ ಸರ್ಕಾರದ ಅಡಿಪಾಯವನ್ನು ಅಸ್ಥಿರಗೊಳಿಸುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟಿನಿಂದಾಗಿ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ, ಇದು ಪಕ್ಷದೊಳಗೆ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ' ಎಂದು ದೂರಿದರು.
ಸರ್ಕಾರದ ಕಾರ್ಯವೈಖರಿ ಬಗ್ಗೆ ಶಾಸಕರಲ್ಲಿ ವ್ಯಾಪಕ ಅಸಮಾಧಾನವಿದ್ದು, ಶೀಘ್ರವೇ ಅದು ಬಯಲಿಗೆ ಬರಲಿದೆ. ಸರ್ಕಾರ ಬೀಳಲು ಕಾರಣವಾಗುತ್ತದೆ ಎಂದು ಅವರು ಹೇಳಿದರು.
ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಪಾಟೀಲ್ ಅವರು ಜನವರಿ 31ರಂದು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ಕಾರಣಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


