ವಿಜಯೇಂದ್ರ ಯುವಕರ ಕಣ್ಮಣಿ, ಅವರನ್ನು ಕೆಳಗಿಳಿಸಿದರೆ ಬಿಜೆಪಿಗೆ 10 ಸ್ಥಾನಗಳು ಸಿಗುವುದಿಲ್ಲ: ರೇಣುಕಾಚಾರ್ಯ
ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಹೇಳುತ್ತಿದ್ದಾರೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಕಿಡಿಕಾರಿದ್ದಾರೆ

ಬೆಂಗಳೂರು: ಕಳೆದ ಬಾರಿ ನಮ್ಮ ಒಳಜಗಳದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಜಯೇಂದ್ರರನ್ನು ಕೆಳಗಿಳಿಸಿದರೆ ರಾಜ್ಯದಲ್ಲಿ ಬಿಜೆಪಿಗೆ 10 ಸ್ಥಾನ ಬರೋದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ರೇಣುಕಾಚಾರ್ಯ ಕಳೆದ 3-4 ತಿಂಗಳಿಂದ ಜೆ.ಪಿ ನಡ್ಡಾ, ಅಮಿತ್ ಶಾ ಭೇಟಿ ಮಾಡಲಾಗ್ತಿಲ್ಲ. ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಹೇಳುತ್ತಿದ್ದಾರೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಕಿಡಿಕಾರಿದ್ದಾರೆ.
ಪಕ್ಷದಲ್ಲಿನ ಬೆಳವಣಿಗೆ ನೋಡಿ ಜನ ಬೈಯುತ್ತಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆ ಕಂಡು ಕಾರ್ಯಕರ್ತರಿಗೆ ನೋವಾಗಿದೆ. ನಾವು ಸೈಲೆಂಟ್ ಇದ್ವಿ, ಯಡಿಯೂರಪ್ಪ, ವಿಜಯೇಂದ್ರ ಮಾತಾಡಬೇಡಿ ಅಂದಿದ್ರು. ಆದ್ರೆ ನಮಗೆ ನೋವಾಗಿದೆ. ಹೀಗಾಗಿ ಇಂದು ತುರ್ತು ಸಭೆ ನಡೆಸಿ ಸುದ್ದಿಗೋಷ್ಠಿ ನಡೆಸಬೇಕಾಯಿತು.
ವಿಜಯೇಂದ್ರರನ್ನ ನೀವು ಕುಗ್ಗಿಸಲು ಆಗಲ್ಲ. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಪಕ್ಷ ಕಟ್ಟಿದ್ರು. ಅದೇ ರೀತಿ ವಿಜಯೇಂದ್ರ ನಾಡಿನ ಯುವಕರ ಕಣ್ಮಣಿ ಆಗಿದ್ದಾರೆ. ಅಂಥವರ ಬಗ್ಗೆ ಮಾತಾಡ್ತೀರ. ಮುಂದಿನ ವಾರ ನಾವು ಮತ್ತೆ ಸಭೆ ಮಾಡ್ತೀವಿ. 100ಕ್ಕೂ ಹೆಚ್ಚು ಜನ ಸೇರಿ ದೊಡ್ಡ ಸಭೆ ಮಾಡ್ತೀವಿ. ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ. ವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ ಎಂದು ಎಚ್ಚರಿಸಿದ್ದಾರೆ.

ವಿಪಕ್ಷ ನಾಯಕರಿಗೂ ಬೇಡವಾದ ವಿಜಯೇಂದ್ರ?: ರಾಜ್ಯಾಧ್ಯಕ್ಷರನ್ನು ಬದಲಿಸಲು RSS ನಾಯಕರಿಗೆ ಬೊಮ್ಮಾಯಿ- ಅಶೋಕ್ ಮನವಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


