ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೇ ಅನಿವಾರ್ಯ: ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದ್ರೆ ಒಳ್ಳೆಯದಲ್ವೇ? ನಾನೊಬ್ಬನೇ ಅಲ್ಲ 138 ಶಾಸಕರ ಬೆಂಬಲ ಅವರಿಗಿದೆ ಎಂದು ಕಂಪ್ಲಿ ಗಣೇಶ್ ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೆ ಅನಿವಾರ್ಯವಾಗಿದ್ದಾರೆ. ನಾವೆಲ್ಲ ಶಾಸಕರು ಅವರ ಬೆಂಬಲಕ್ಕಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್ ಅವರು ಶನಿವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂಪ್ಲಿ ಗಣೇಶ್, ಸಿದ್ದರಾಮಯ್ಯ ಅವರು ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ. ಇದಕ್ಕೆ ಈ ಬಾರಿಯ ವಿಧಾನಸಭೆ ಚುನಾವಣೆಯೇ ಸಾಕ್ಷಿಯಾಗಿದೆ. ಅವರು ಒಂದು ರೀತಿ ರೋಲ್ ಮಾಡೆಲ್ ಇದ್ದಂತೆ ಎಂದರು.
ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕು ಎಂಬ ವಿಚಾರವಾಗಿ ಮಾತನಾಡಿದ ಗಣೇಶ್, ಹೈಕಮಾಂಡ್ ಹೇಳಿದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದ್ರೆ ಒಳ್ಳೆಯದಲ್ವೇ? ನಾನೊಬ್ಬನೇ ಅಲ್ಲ 138 ಶಾಸಕರ ಬೆಂಬಲ ಅವರಿಗಿದೆ ಎಂದು ಗಣೇಶ್ ಬ್ಯಾಟಿಂಗ್ ಮಾಡಿದರು.
ಇನ್ನು ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ, ಅದನ್ನು ಪಾರ್ಟಿ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



