ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಫೆಬ್ರವರಿ 20 ರೊಳಗೆ ಉತ್ತರ: ಬಿ.ವೈ ವಿಜಯೇಂದ್ರ

ಕೇಂದ್ರದ ಶಿಸ್ತು ಸಮಿತಿ ಯತ್ನಾಳರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ? ಏನಾಗುತ್ತಿದೆ? ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಫೆಬ್ರವರಿ 20 ರೊಳಗೆ ಉತ್ತರ: ಬಿ.ವೈ ವಿಜಯೇಂದ್ರ
ಬಿ ವೈ ವಿಜಯೇಂದ್ರ
Published On :

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆ.20 ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಮುಂದುವರಿಯುವ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯವೇ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಕೇಂದ್ರದ ಶಿಸ್ತು ಸಮಿತಿ ಯತ್ನಾಳರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ? ಏನಾಗುತ್ತಿದೆ? ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದು ತಿಳಿಸಿದರು.

ಕೇಂದ್ರದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು. ಯತ್ನಾಳ್‍ರಿಗೆ ನೋಟಿಸ್ ಕೊಡಲು ತಾಕತ್ತಿಲ್ಲ ಎಂಬ ರಾಜಣ್ಣನವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ರಾಜಣ್ಣನವರು ನಮ್ಮ ಪಕ್ಷದವರೇ? ಅವರು ಕಾಂಗ್ರೆಸ್ ಪಕ್ಷದವರು. ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.