ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ: ಸಿಎಂ ಸಿದ್ದರಾಮಯ್ಯ
ರಾಜ್ಯದ ರಾಜಕೀಯ ವಲಯದಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸತ್ತದೆ ಎಂದು ಸೋಮವಾರ ಹೇಳಿದ್ದಾರೆ.
ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ "ಪರ್ಯಾಯ ಮುಖ್ಯಮಂತ್ರಿ" ಅಥವಾ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.
ಇಂದು ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, "ಅದನ್ನು ಹೈಕಮಾಂಡ್ ನಿರ್ಧರಿಸಬೇಕು" ಎಂದು ತಿಳಿಸಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಬಲ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು, ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹಲವು ಬಾರಿ ಬಹಿರಂಗವಾಗಿಯೇ ಹೇಳಿದ್ದಾರೆ.
ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಒಂದು ವರ್ಗವು ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಬಿಂಬಿಸಲು ಪದೇ ಪದೇ ಪ್ರಯತ್ನಗಳು ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



