ರಾಜಕೀಯ

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ ಹೇಳಿಕೆ: ಇದೇನಾ ಮತದಾರರಿಗೆ ಕೊಡುವ ಗೌರವ? ಸಚಿವ ಜಾರ್ಜ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ?

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ ಹೇಳಿಕೆ: ಇದೇನಾ ಮತದಾರರಿಗೆ ಕೊಡುವ ಗೌರವ? ಸಚಿವ ಜಾರ್ಜ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಆರ್.ಅಶೋಕ್, ಕೆ.ಜೆ. ಜಾರ್ಜ್
Published On :

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ ಎಂಬ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರ ಉಡಾಫೆಯ ಉತ್ತರ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಚಿವ ಜಾರ್ಜ್ ವಿರುದ್ಧ ವಾಗ್ದಾಳಿ ನಡೆಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ? ಎಂದು ಪ್ರಶ್ನಿಸಿದ್ದಾರೆ.

ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ ಮತದಾರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ? ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ ಎಂದು ಆಗ್ರಹಿಸಿದ್ದಾರೆ.

ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ. ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರೆಂಟಿ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.