ಉದಯಗಿರಿ ಗಲಭೆ ಪ್ರಕರಣ: ಆರೋಪಿಗಳಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ- ಪ್ರತಾಪ್ ಸಿಂಹ
ಪೊಲೀಸರು ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಅಪರಾಧಿಗಳ ಬಂಧನದಲ್ಲಿ ವಿಳಂಬವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ.

ಮೈಸೂರು: ಉದಯಗಿರಿ ಘಟನೆಯಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಬುಧವಾರ ಆರೋಪಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಅಪರಾಧಿಗಳ ಬಂಧನದಲ್ಲಿ ವಿಳಂಬವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್‌ಲೈನ್ ಅಜೆಂಡಾವಾಗಿದೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬೇಕಾಗಿಲ್ಲ. ಅವರಿಗೆ ಮುಸಲ್ಮಾನರ ಮತ ಬೇಕು ಅಷ್ಟೇ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅಲ್ಲದೇ, ರಾಜ್ಯ ಸರ್ಕಾರವನ್ನು ತಾಲಿಬಾನಿ ಸರ್ಕಾರಕ್ಕೆ ಹೋಲಿಸಿ ಸಿಎಂ ಸಿದ್ದರಾಮಯ್ಯ ಅದರ ಮುಖ್ಯಸ್ಥರಾಗಿದ್ದಾರೆಂದು ಆರೋಪ ಮಾಡಿದರು.
ಮುಸ್ಲಿಂರು ಬರೀ ಕೌರ್ಯ ಮಾಡುತ್ತಿದ್ದಾರೆ. ಅವರಿಗೆ ಶೌರ್ಯ ಎಂಬುದು ತಿಳಿದಿಲ್ಲ, ಹಿಂದೂಗಳ ಮೇಲೆ ಕಲ್ಲು ಹೊಡೆಯಲು ಕಾಂಗ್ರೆಸ್ ಸರ್ಕಾರ ಪುಂಡ ಮುಸ್ಲಿಂರಿಗೆ ಫ್ರೀ ಪರ್ಮಿಟ್ ನೀಡಿದೆ. ಮುಸಲ್ಮಾನರು ಪ್ರೊಟೆಕ್ಷನ್ ಕೇಳಿದರೆ ಸರ್ಕಾರ ನೀಡಲಿ ಯಾರು ಬೇಡವೆನ್ನುತ್ತಾರೆ. ಆದರೆ, ಅವರು ದುಷ್ಕೃತ್ಯಗಳನ್ನು ನಡೆಸಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ? ಅವರಿಗೆ ಹೆದರಿ ಹಿಂದೂಗಳು ಮನೆ ಬಿಟ್ಟು ಬೇರೆ ಕಡೆ ಹೋಗಬೇಕೇ? ಅವರು ಹೊಗೋದಾದರೂ ಎಲ್ಲಿಗೆ ? ಎಂದು ಪ್ರಶ್ನಿಸಿದರು.
ಮುಸಲ್ಮಾನರಿಗಾದರೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ, ಹಿಂದೂಗಳಿಗೆ ಯಾವು ದೇಶವಿದೆ? ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಹಾಗೇ ಸರ್ಕಾರ ನಡೆಸಿದರೆ ಮುಸಲ್ಮಾನರು ಹದ್ದು ಬಸ್ತಿನಲ್ಲಿರುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಮುಸಲ್ಮಾನರು ತಪ್ಪು ಮಾಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಜಿ.ಪರಮೇಶ್ವರ್ ಅವರಿಗೆ ಗೃಹ ಸಚಿವರಾಗಿರಲು ಯಾವುದೇ ನೈತಿಕತೆ ಇಲ್ಲ. ಇನ್ನು ನಮ್ಮ ರಾಜ್ಯದಲ್ಲಿ ಬುಲ್ಡೋಜರ್ ಕಾನೂನು ತರಲು ಯಾರಿಗೆ ಧಮ್ ಇದೆ? ಯೋಗಿ ಆದಿತ್ಯನಾತ್ ಅವರ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಕು ಸಾಧ್ಯನಾ ಎಂದು ವಾಗ್ದಾಳಿ ನಡೆಸಿದರು.

ಉದಯಗಿರಿ ಹಿಂಸಾಚಾರ: ಘಟನೆಗೆ ಪ್ರಚೋದನೆ, ಗಲಭೆ ನಡೆಸಿದ ಯಾರನ್ನೂ ಬಿಡಬೇಡಿ; ಪೊಲೀಸರಿಗೆ ಸಿದ್ದರಾಮಯ್ಯ ಖಡಕ್ ಸಂದೇಶ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


