ಯತ್ನಾಳ್ ಎಲ್ಲಾ ಹೇಳಿಕೆಗಳಿಗೆ ಒಂದೇ ಬಾರಿಗೆ ಉತ್ತರ ಕೊಡುವೆ: ವಿಜಯೇಂದ್ರ
ಯತ್ನಾಳ್ ಮಾತನಾಡಿದ್ದಕ್ಕೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನಾನು ರಾಜ್ಯಾಧ್ಯಕ್ಷ. ಮಾಡಲು ಸಾಕಷ್ಟು ಕೆಲಸಗಳಿವೆ. ಅವರು ನನಗೆ ಕೇಳಿದ ಪ್ರಶ್ನೆಗೆ ನಾನೇ ಸಮಯ ಬಂದಾಗ ಉತ್ತರ ಕೊಡುವೆ.

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡುತ್ತಿರುವ ಹೇಳಿಕೆಗಳನ್ನೆಲ್ಲಾ ಪಟ್ಟಿ ಮಾಡಿಟ್ಟುಕೊಂಡು ಒಂದೇ ಬಾರಿಗೆ ಉತ್ತರ ನೀಡುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಮಾರ್ಮಿಕವಾಗಿ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಮಾತನಾಡಿದ್ದಕ್ಕೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನಾನು ರಾಜ್ಯಾಧ್ಯಕ್ಷ. ಮಾಡಲು ಸಾಕಷ್ಟು ಕೆಲಸಗಳಿವೆ. ಅವರು ನನಗೆ ಕೇಳಿದ ಪ್ರಶ್ನೆಗೆ ನಾನೇ ಸಮಯ ಬಂದಾಗ ಉತ್ತರ ಕೊಡುವೆ ಎಂದು ಹೇಳಿದರು.
ಯತ್ನಾಳ್ ಏಕವಚನ ಬಳಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿ, ಯತ್ನಾಳ್ ಹಿರಿಯರು ಇದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೋ, ಇನ್ನೊಂದು ಭಾಷೆಯಲ್ಲಿ ಮಾತನಾಡಿದ್ದಾರೋ ತಲೆ ಕೆಡಿಸಿಕೊಳ್ಳಲ್ಲ. ನಮಗೆ ಪಕ್ಷದಲ್ಲಿ ಕೆಲಸ ಮಾಡಲು ಸಾಕಷ್ಟು ಇದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



