ರಾಜಕೀಯ

ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ: ಕಠಿಣ ಕ್ರಮಕ್ಕೆ BJP ಆಗ್ರಹ

ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ.

ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ: ಕಠಿಣ ಕ್ರಮಕ್ಕೆ BJP ಆಗ್ರಹ
ಬಿಜೆಪಿ — online desk
Published On :

ಬೆಂಗಳೂರು: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು, ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ. ಈ ನಡುವೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ಮರಾಠಿ ಭಾಷೆಯ ಹೆಸರಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿರ್ವಾಹಕರ ಮೇಲೆ ಹಲ್ಲೆ ನಡೆದಿರುವ ಘಟನೆ ಭಾಷಾ ದೌರ್ಜನ್ಯದ ಪರಮಾವಧಿಯಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಈ ದುರ್ವರ್ತನೆಯನ್ನು ಸಹಿಕೊಳ್ಳುವ ಪ್ರಶ್ನೆಯೇ ಇಲ್ಲ. ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ಮರಾಠಿ-ಕನ್ನಡದ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕನ್ನಡ ವಿರೋಧಿ ಮನಸ್ಥಿತಿಯ ದುರಾಕ್ರಮಣಗಳು ಪುನರಾವರ್ತನೆಯಾಗದ ರೀತಿಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಹಿಸಲಿ ಎಂದು ಒತ್ತಾಯಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.