"ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮ, ರಿಪಬ್ಲಿಕ್ ಆಫ್ ಕಲ್ಬುರ್ಗಿಯಲ್ಲಿ ಸುಪಾರಿ ಹಂತಕರ ಅಂಧಾ ದರ್ಬಾರ್"
ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣ ಪೋಸ್ಟ್ ವಾರ್ ಆರಂಭಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆಯನ್ನು ಕಲಬುರಗಿಯ ನಿಜಾಮ ಎಂದು ಹೇಳಿದೆ.

ಕಲಬುರಗಿ: ಬೀದರ್ನಲ್ಲಿ ಯುವ ಗುತ್ತಿಗೆದಾರ ಸಚೀನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ಸಂಬಂಧ ಬಿಜೆಪಿ-ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ. ಈ ಮಧ್ಯೆ ಎರಡೂ ಪಕ್ಷಗಳ ಸೋಶಿಯಲ್ ಮೀಡಿಯಾ ಪೋಸ್ಟ್ ವಾರ್ ಜನರ ಗಮನ ಸೆಳೆಯುತ್ತಿವೆ.
ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣ ಪೋಸ್ಟ್ ವಾರ್ ಆರಂಭಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆಯನ್ನು ಕಲಬುರಗಿಯ ನಿಜಾಮ ಎಂದು ಹೇಳಿದೆ.
ಇಷ್ಟೇ ಅಲ್ಲದೇ, ಖರ್ಗೆ ಕುಟುಂಬದವರದ್ದು ಪ್ರಾಯೋಜಿತ ಸುಪಾರಿ ಎಂದೂ ಟೀಕಾ ಪ್ರಹಾರ ನಡೆಸಿರುವ ಬಿಜೆಪಿ "ವಿವಿಧ ರೀತಿಯಲ್ಲಿ ಗೂಂಡಾಗಿರಿಗೆ ಬೇಕಾದ ಸಾಮಗ್ರಿಗಳು ದೊರೆಯುತ್ತವೆ, ಸುಪಾರಿ ನೀಡುವವರು ನಮ್ಮನ್ನು ಸಂಪರ್ಕಿಸಿ" ಎಂದು ಬರೆದಿರುವ ಫಲಕದೊಂದಿಗೆ ಪ್ರಿಯಾಂಕ್ ಖರ್ಗೆಯ ವ್ಯಂಗ್ಯ ಚಿತ್ರ ರಚಿಸಿ ವ್ಯಂಗ್ಯವಾಡಿದೆ.
ಇದಕ್ಕೂ ಮೊದಲು ಖರ್ಗೆ ಪ್ರಾಯೋಜಿತ ಸುಪಾರಿ ಎಂಬ ಪೋಸ್ಟರ್ ಅಂಟಿಸಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದ್ದರು. ಈ ಘಟನೆಗಳ ಹಿನ್ನೆಲೆಯಲ್ಲಿ ರೇಸ್ಕೋರ್ಸ್ ರಸ್ತೆಯಲ್ಲಿರುವ ಪ್ರಿಯಾಂಕ್ ಖರ್ಗೆ ಸರ್ಕಾರಿ ನಿವಾಸಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



