ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ, ಮಣಿಕಂಠ ರಾಠೋಡ್ ಆಡಿಯೋ ಬಿಡುಗಡೆ
ಮಣಿಕಂಠ ರಾಠೋಡ್ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಬೆಂಗಳೂರು: ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಹಾಗಿದ್ದರೂ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಚಿನ್ ಪಾಂಚಲ್ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಗಳಲ್ಲಿ ಹೊಂದಾಣಿಕೆ ಇಲ್ಲ ಎಂದರು.
ಸಂತೋಷ್ ಪಾಟೀಲ್ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022, ಏಪ್ರಿಲ್ 12 ರಂದು ಉಡುಪಿಯ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುತ್ತಿಗೆದಾರರ ಸಂತೋಷ್ ಪಾಟೀಲ್ ಡೆತ್ ನೋಟ್ ನಲ್ಲಿ ಅಂದಿನ ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೆಸರು ಉಲ್ಲೇಖಿಸಿದ್ದರು. ಅಲ್ಲದೆ, ಹೆಂಡತಿ ಮಕ್ಕಳಿಗೆ ಪರಿಹಾರ ಕೊಡಬೇಕು ಎಂದು ಹೇಳಿದ್ದರು. ಆದರೆ ಸಚಿನ್ ಪಾಂಚಲ್ ಡೆತ್ ನೋಟ್ ನಲ್ಲಿ ನನ್ನ ಹೆಸರು ಏಲ್ಲಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಸಂತೋಷ್ ಪಾಟೀಲ್ ಕುಟುಂಬಕ್ಕೆ ಬಿಜೆಪಿಗರು ಸಹಾಯ ಮಾಡಿದ್ದಾರಾ? ಸಂತೋಷ್ ಪಾಟೀಲ್ ಕುಟುಂಬವನ್ನು ಬಿಜೆಪಿಯವರು ಇದುವರೆಗೂ ಏಕೆ ಭೇಟಿ ಮಾಡಿಲ್ಲ? ಕೇವಲ ಮೊಸಳೆ ಕಣ್ಣೀರು ಸುರಿಸಿದರೆ ರಾಜ್ಯದ ಜನ ಮೋಸ ಹೋಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರ ಧ್ವನಿಯುಳ್ಳ ಆಡಿಯೋವೊಂದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ.
ಈ ಮಣಿಕಂಠ ರಾಠೋಡ್ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಣಿಕಂಠ ರಾಠೋಡ್ ನೇತೃತ್ವದಲ್ಲೇ ಬಿಜೆಪಿ 'ಕಲಬುರಗಿ ಚಲೋ' ಹಮ್ಮಿಕೊಂಡಿದೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



