JDS ಮುಗಿಸಲು ಕಾಂಗ್ರೆಸ್ 'ಆಪರೇಷನ್ ಹಸ್ತ'ಕ್ಕೆ ಸ್ಕೆಚ್: ಕುಮಾರಸ್ವಾಮಿ ಬಾಂಬ್
ಜೆಡಿಎಸ್ ಮುಗಿಸಬೇಕು ಎಂದು ಹೇಳಿ 12-13 ಶಾಸಕರನ್ನು ಕರೆದುಕೊಂಡು ಬನ್ನಿ ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ಆದರೆ, ಅದು ವರ್ಕ್ ಆಗಲ್ಲ, ಜೆಡಿಎಸ್ನ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್ನಿಂದ 'ಆಪರೇಷನ್ ಹಸ್ತ'ದ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಗಂಭೀರ ಆರೋಪ ಮಾಡಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನ್ನು ಮುಗಿಸಬೇಕು ಎಂದು ಹೇಳಿ 12-13 ಶಾಸಕರನ್ನು ಕರೆದುಕೊಂಡು ಬನ್ನಿ ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ಆದರೆ, ಅದು ವರ್ಕ್ ಆಗಲ್ಲ, ಜೆಡಿಎಸ್ನ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.
ಕಾಂಗ್ರೆಸ್ನರ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ನವರು ಆಪರೇಷನ್ ಹಸ್ತಕ್ಕೆ ಮುಂದಾಗಿರುವ ಮಾಹಿತಿ ಸಿಕ್ಕಿದೆ. ನಮ್ಮ ಶಾಸಕರ ಏನೇನು ನಡೆಯುತ್ತಿದೆ ಎಂಬುದನ್ನು ನನ್ನ ಬಳಿ ಹೇಳಿದ್ದಾರೆ.ಜನವರಿ 15 ರವರೆಗೂ ನಾನು ಏನೂ ಮಾತನಾಡಲ್ಲ. ಮಾತನಾಡಲು ಬಹಳ ವಿಷಯಗಳಿವೆ. ಸಂಕ್ರಾಂತಿ ಕಳೆಯಲಿ ಮಾತನಾಡುತ್ತೇನೆ. ಜೆಡಿಎಸ್ಗೆ ಇದೆಲ್ಲಾ ಶಾಕ್ ಕೊಡಲ್ಲ. ಜೆಡಿಎಸ್ನ್ನು ದುರ್ಬಲ ಮಾಡಕೂ ಆಗೋಲ್ಲ. ದೇವರೇ ಕಾಂಗ್ರೆಸ್ನವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಹೇಳಿದರು.
ದೇಶದಲ್ಲಿ ಗ್ಯಾರಂಟಿ ಕೊಡುವುದಕ್ಕೆ ಕಾಂಪಿಟೇಷನ್ ನಡೆಯುತ್ತಿದೆ. ಗ್ಯಾರಂಟಿ ಕೊಟ್ಟ ಹಿಮಾಚಲ ಪ್ರದೇಶ ರಾಜ್ಯದ ಸ್ಥಿತಿ ಇವತ್ತು ಏನಾಗಿದೆ. ಗ್ಯಾರಂಟಿಗಳ ಬಗ್ಗೆ ನಾನು ಚರ್ಚೆ ಮಾಡಲ್ಲ. ಕಾಂಗ್ರೆಸ್ ಶಾಸಕರು, ಮಂತ್ರಿಗಳು ಅವರ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಲಿ ಎಂದ ಸಚಿವರು, ಕಾಂಗ್ರೆಸ್ ಶಾಸಕರಿಗೆ ನಾನು ಮನವಿ ಮಾಡುತ್ತೇನೆ. ಅವರೆಲ್ಲರಿಗೂ ಆತ್ಮಸಾಕ್ಷಿ ಇದ್ದರೆ ಅವರು ಬೆಂಬಲ ಕೊಟ್ಟಿರುವ ಸರ್ಕಾರ ಹೋಗುತ್ತಿರುವ ಮಾರ್ಗ ಏನು ಎಂಬುದನ್ನು ಯೋಚನೆ ಮಾಡಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



