ಡಿಕೆಶಿ ವಿದೇಶ ಪ್ರವಾಸದಲ್ಲಿರುವಾಗಲೇ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಜೊತೆಗೆ 35 MLA ಗಳು ಭಾಗಿ!
KPCC ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದರು.
ಸಂಪುಟ ಸಭೆಯ ಬಳಿಕ ಸಚಿವರ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಭಾಗಿಯಾಗಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಜತೆಗೆ ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದರು.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟಕ್ಕೆ ಆಹ್ವಾನಿಸಿದ್ದಾಗಿ ಸತೀಶ್ ಜಾರಕಿಹೊಳಿ ಕಚೇರಿ ಮೂಲಗಳು ಸ್ಪಷ್ಟಪಡಿವೆ. ಆದರೂ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದಾಗ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಔತಣಕೂಟ ಮಹತ್ವ ಪಡೆದುಕೊಂಡಿದೆ.

ಯಾರ ನಿರ್ದೇಶನದ ಮೇರೆಗೆ ಠಾಣೆಯಿಂದ ಠಾಣೆಗೆ ಸಿ.ಟಿ ರವಿಯನ್ನು ಸುತ್ತಾಡಿಸಿದ್ದಾರೆ ಗೊತ್ತಿಲ್ಲ: ಸಚಿವ ಸತೀಶ್ ಜಾರಕಿಹೊಳಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


