ಸ್ವಾಮಿ ಡಿ.ಕೆ ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿನ್ನರ್ ಮೀಟಿಂಗ್ ಗೆ ಅಶೋಕ್ ಟಾಂಗ್!
ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ, ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ. ಇನ್ನೊಂದು ಕಡೆ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಡೆದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಆರ್. ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ.
ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದಿದ್ದಾರೆ.
ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದು ಟಾಂಗ್ ನೀಡಿದ್ದಾರೆ.

ಡಿಕೆಶಿ ವಿದೇಶ ಪ್ರವಾಸದಲ್ಲಿರುವಾಗಲೇ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಜೊತೆಗೆ 35 MLA ಗಳು ಭಾಗಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


