ಶೇ.60 ರಷ್ಟು ಕಮಿಷನ್: ಕುಮಾರಸ್ವಾಮಿ ಆರೋಪ ಸಾಬೀತುಪಡಿಸಲಿ- ಸಿಎಂ ಸಿದ್ದರಾಮಯ್ಯ ಸವಾಲು!
ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು

ದಾವಣಗೆರೆ: ಕಾಂಗ್ರೆಸ್ ಆಡಳಿತಾವಧಿಯಲ್ಲಿ ಶೇ. 60 ರಷ್ಟು ಕಮಿಷನ್ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದರು.
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬರವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.
ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದು, ಪೂರ್ವಭಾವಿ ಸಭೆಗಳಲ್ಲಿ ಆದ್ಯತೆಗಳ ಕುರಿತು ಮಾತನಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



