ಸಂಪುಟ ಸಹೋದ್ಯೋಗಿಗಳೊಂದಿಗಿನ ಔತಣಕೂಟದಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ
ಸಂಪುಟ ಸಹೋದ್ಯೋಗಿಗಳು ಒಟ್ಟಿಗೆ ಸೇರಿದೆ. ಮಾಧ್ಯಮಗಳು ವಿವಾದ ಸೃಷ್ಟಿಸುತ್ತಿವ. ಕೆಲವರು ಇದಕ್ಕೆ ರಾಜಕೀಯ ಬಣ್ಣ ನೀಡುತ್ತಿದ್ದಾರೆ. ಔತಣಕೂಟ ನಡೆಸುವುದರಲ್ಲಿ ತಪ್ಪೇನಿದೆ.

ದಾವಣಗೆರೆ: ಇತ್ತೀಚೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ನಡೆಸಿದ ಔತಣಕೂಟದಲ್ಲಿ ಯಾವುದೇ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಇಲ್ಲಸಲ್ಲದ ಸುದ್ದಿಗಳನ್ನು ಸೃಷ್ಟಿಸುತ್ತಿವೆ. ಸಂಪುಟ ಸಹೋದ್ಯೋಗಿಗಳು ಒಟ್ಟಿಗೆ ಸೇರಿದೆ. ಮಾಧ್ಯಮಗಳು ವಿವಾದ ಸೃಷ್ಟಿಸುತ್ತಿವ. ಕೆಲವರು ಇದಕ್ಕೆ ರಾಜಕೀಯ ಬಣ್ಣ ನೀಡುತ್ತಿದ್ದಾರೆ. ಔತಣಕೂಟ ನಡೆಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿನ ಬದಲಾವಣೆ ಸುದ್ದಿ ಕುರಿತು ಮಾತನಾಡಿ, ನಮ್ಮಿಂದ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲು ಸಾಧ್ಯವೇ? ಈ ಕುರಿತ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟದ್ದು. ಎಂದು ತಿಳಿಸಿದರು.
ಬಸ್ ದರ ಹೆಚ್ಚಳದ ಕುರಿತು ಮಾತನಾಡಿ, ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬಸ್ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹೆಚ್ಚಾಗಿದೆ ಮತ್ತು ಸಾರಿಗೆ ನಿಗಮಗಳಲ್ಲಿ ಡೀಸೆಲ್ ಬೆಲೆಗಳು ಮತ್ತು ವೇತನವನ್ನಬೂ ಹೆಚ್ಚಳ ಮಾಡಲಾಗಿದೆ. ಆದ್ದರಿಂದ, ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿತ್ತು ಎಂದರು.
ಬಸ್ ದರವನ್ನು ಹೆಚ್ಚಿಸುವ ಬೇಡಿಕೆಯೂ ಬಹಳ ದಿನಗಳಿಂದ ಇತ್ತು, ಆದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



