40% ರಷ್ಟು ಕಮಿಷನ್ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದೀರಿ? ಸಿಎಂ ಸಿದ್ದರಾಮಯ್ಯಗೆ HDK ಪ್ರಶ್ನೆ
ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು!

ಬೆಂಗಳೂರು: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದರು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, 60% ಕಮೀಶನ್! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ ಎಂದಿದ್ದಾರೆ.
ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ.
ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, 'ಯಾಕಪ್ಪಾ ಹಾಗೆ ಹೇಳಿದಿರಿ?' ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಎಚ್.ಡಿ.ಕೆ ಪ್ರಶ್ನಿಸಿದ್ದಾರೆ.
ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..?ಕಮೀಷನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ. 60% ಕಮಿಷನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್ ಎಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



