ಊಟದಲ್ಲಿ ರಾಜಕೀಯ ಏಕೆ ಬೆರೆಸುತ್ತೀರಿ; ಇಲ್ಲಸಲ್ಲದ ಅರ್ಥ ಏಕೆ ಕಲ್ಪಿಸುತ್ತೀರಿ?: ಮಾಧ್ಯಮಗಳಿಗೆ ಡಿ.ಕೆ ಶಿವಕುಮಾರ್ ಪ್ರಶ್ನೆ
ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದರು.

ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು.
ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದರು.
ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂದಾಗ, “ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ” ಎಂದರು.

ಡಿಕೆಶಿ ವಿದೇಶ ಪ್ರವಾಸದಲ್ಲಿರುವಾಗಲೇ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಜೊತೆಗೆ 35 MLA ಗಳು ಭಾಗಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


